Sunday, January 19, 2025
Sunday, January 19, 2025

ಬಾಲ್ ಬ್ಯಾಡ್ಮಿಂಟನ್: ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಬಾಲ್ ಬ್ಯಾಡ್ಮಿಂಟನ್: ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

Date:

ಉಡುಪಿ, ಸೆ.27: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ತಂಡದಲ್ಲಿ ಅಕ್ಷಯ್ ಬಿಲ್ಲವ, ಪ್ರಜ್ವಲ್ ಪೈ, ರಿತಿಕ್ ಆರ್ ಪೂಜಾರಿ, ಸನ್ಮಿತ್, ನಿಹಾಲ್ ಎಸ್ ಪೂಜಾರಿ, ಸಂಕೇತ್, ಕೀರ್ತನ್ ಡಿ ಪೂಜಾರಿ, ಪ್ರಥಮ್ ಯು ಮೇಸ್ತ, ರಜತ್, ಮತ್ತು ಆದಿತ್ಯ ಶೆಟ್ಟಿ ಹಾಗೂ ಬಾಲಕಿಯರ ತಂಡದಲ್ಲಿ ಕ್ಷಮಾ ಆಚಾರ್ಯ, ಸನ್ನಿಧಿ ಕರ್ಣಿಕ್, ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಖುಷಿ, ಶ್ರೇಷ್ಠ ಮೇಸ್ತ, ಮಾನ್ಯ ಖಾರ್ವಿ, ಶ್ರೀನಿಧಿ ವಿ ಖಾರ್ವಿ, ಸಾಪೇಕ್ಷಾ ಖಾರ್ವಿ ಮತ್ತು ಭೂಮಿಕಾ ಖಾರ್ವಿ ಪ್ರತಿನಿಧಿಸಿದ್ದರು. ಕ್ಷಮ ಆರ್ ಆಚಾರ್ಯ, ಸುನಿಧಿ ಕರ್ಣಿಕ್, ಸಹನಾ ಖಾರ್ವಿ, ಅಕ್ಷಯ್ ಬಿಲ್ಲವ, ಪ್ರಜ್ವಲ್ ಪೈ ಮತ್ತು ರಿತಿಕ್ ಆರ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ವೃಂದ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!