Sunday, February 23, 2025
Sunday, February 23, 2025

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಬೀಚ್ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಶುಕ್ರವಾರ ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರು ಆಕರ್ಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು. ಹೊಸ ಬೀಚಿನ ಅಭಿವೃದ್ಧಿಯ ದೃಷ್ಠಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಮಳೆಗಾಲದ ನಂತರ ಹೆಚ್ಚು ತ್ಯಾಜ್ಯಗಳು ಕಡಲತೀರದ ಬಳಿ ಸೇರಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್‌ಗೆ ಆಗಮಿಸುವುದರಿಂದ ಬೀಚ್‌ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ಪರಿಸರ ಸ್ಚಚ್ಛವಾಗಿ ಇರಿಸಿಕೊಳ್ಳುವುದರಿಂದ ನಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಅಬಕಾರಿ ಕಮೀಷನರ್ ಬಿಂದುಶ್ರೀ, ಪಿ.ಡಿ.ಓ, ಪಿ.ಪಿ.ಸಿ ಸಂಧ್ಯಾ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಮಾಹೆಯ ಉಪನ್ಯಾಸಕರುಗಳು ಹಾಗೂ ಸಿಬ್ಬಂದಿಗಳು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ಕರಾವಳಿ ಪ್ರವಾಸೋದ್ಯಮ ಅಸೋಸಿಯೇಷನ್ ಅಧ್ಯಕ್ಷ ಮನೋಹರ್ ಶೆಟ್ಟಿ, ಕೋಟ ಪಂಚವರ್ಣ ಯುವಕ ಮಂಡಲದ ಸದಸ್ಯರುಗಳು, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!