Sunday, January 19, 2025
Sunday, January 19, 2025

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

Date:

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ವಲಯ ಸಾಲಿಗ್ರಾಮ, ಎಸ್‌ಸಿಐ ಕೋಟ ಲಿಜನ್ ಇವರ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಎಸ್‌ಎಲ್‌ಆರ್‌ಎಂ ಘಟಕ ಸಂಯೋಜನೆಯೊಂದಿಗೆ 226ನೇ ಭಾನುವಾರದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಕೋಟ ಗ್ರಾ.ಪಂ ಗಿಳಿಯಾರು ರಾಷ್ಟ್ರೀಯ ಹೆದ್ದಾರಿ ಹರ್ತಟ್ಟು ಭಾಗದಲ್ಲಿ ನಡೆಯಿತು ಕೋಟ ಗ್ರಾಮ ಪಂಚಾಯತ್ ಸದಸ್ಯ ಅಜಿತ್ ದೇವಾಡಿಗ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸಂಚಾಲಕ ಅಮೃತ್ ಜೋಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಎಸ್‌ಸಿಐ ಕೋಟ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!