ಉಡುಪಿ, ಸೆ.30: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟçಪಿತ ಮಹಾತ್ಮಾ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವರ ಇಂತಿವೆ.
ಪ್ರೌಢಶಾಲಾ ವಿಭಾಗ: ಕಾರ್ಕಳ ಕಾಬೆಟ್ಟುವಿನ ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಪ್ರಥಮ, ಬ್ರಹ್ಮಾವರದ ಮಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೈತ್ರಿ ದ್ವಿತೀಯ ಹಾಗೂ ಉಡುಪಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9 ನೇತರಗತಿ ವಿದ್ಯಾರ್ಥಿನಿ ಶಿವಾನಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಪದವಿಪೂರ್ವ ಶಿಕ್ಷಣ ವಿಭಾಗ: ಹೆಮ್ಮಾಡಿ ಜನತಾ ಪಿ.ಯು ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಪ್ರಥಮ, ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪನ್ನಿಧಿ ಡಿ. ಶೆಟ್ಟಿ ದ್ವಿತೀಯ ಹಾಗೂ ಉಡುಪಿಯ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ದಿವ್ಯ ತೃತೀಯ ಸ್ಥಾನ ಪಡೆದಿರುತ್ತಾರೆ.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿ.ಎ ವಿದ್ಯಾರ್ಥಿನಿ ಭೀಮಾಂಬಿಕಾ ಪ್ರಥಮ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಅಮಿಷಾ ದ್ವಿತೀಯ ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿ.ಎ ವಿದ್ಯಾರ್ಥಿನಿ ಅಶ್ವಿನಿ ಡಿ.ಎಸ್ ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.