Monday, September 30, 2024
Monday, September 30, 2024

ಜಿಲ್ಲೆಯಲ್ಲಿ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ

ಜಿಲ್ಲೆಯಲ್ಲಿ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ

Date:

ಉಡುಪಿ, ಸೆ.30: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಅನುಮತಿ ನೀಡಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಅಕ್ಟೋಬರ್ 7 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದ್ದು, ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕು.

ಇ-ಆಸ್ತಿ ತಂತ್ರಾಂಶದಿಂದ ಸ್ವತ್ತುಗಳ ನೋಂದಣಿ ಮೇಲೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಲು, ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು, ನೈಜ ಮಾಲೀಕರಿಗೆ ವಂಚಿಸಿ, ಬೇರೆಯವರಿಂದ ಸ್ವತ್ತುಗಳ ನೊಂದಣಿಯನ್ನು ತಪ್ಪಿಸಲು, ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಹಾಗೂ ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಇ-ಖಾತಾ ಸಂಯೋಜನೆಯು ಸಾರ್ವಜನಿಕರಿಗೆ ಉಪಯೋಗವಾಗಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!