Monday, September 30, 2024
Monday, September 30, 2024

ವಿಶ್ವ ಹೃದಯ ದಿನಾಚರಣೆ

ವಿಶ್ವ ಹೃದಯ ದಿನಾಚರಣೆ

Date:

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು ಡಯಾಲಿಸಿಸ್ ಸೆಂಟರ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಂಜಿಬೆಟ್ಟುವಿನ ಓಕುಡೆ ಕ್ಲಿನಿಕ್‌ನಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಉಚಿತ ಇಕೋ, ಇಸಿಜಿ ಹಾಗೂ ಆರ್‌ಬಿಎಸ್ ಪರೀಕ್ಷೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಮಾತನಾಡಿ, ಹೃದಯದ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎನ್ನುವ ಉದ್ದೇಶದಿಂದ ಅಂತರಾಷ್ಟ್ರೀಯ ಹೃದಯ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಲಯನ್ಸ್ ವಲಯಾಧ್ಯಕ್ಷ ಅನಂತ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಉಡುಪಿ ಮಿಡ್‌ಟೌನ್ ನಿರ್ದೇಶಕ ಪುರುಷೋತ್ತಮ ನಾಯಕ್, ಖಜಾಂಚಿ ರೇಖಾ ಶೆಟ್ಟಿ, ಡಾ. ಅಭಿನಯ್ ಉಪಸ್ಥಿತರಿದ್ದರು. ಸಾರ್ವಜನಿಕರು ಹೃದಯ ಪರೀಕ್ಷೆ, ಉಚಿತ ಫೆಬ್ರೋಸ್ಕಾನ್, ಲಿವರ್ ಮತ್ತು ಲಿಪಿಡ್ ಪ್ರೊಫೈಲ್ ಪರೀಕ್ಷೆಗಳನ್ನು ಮಾಡಿಸಿಕೊಂಡರು. ಹೃದಯ ಆರೋಗ್ಯದ ಕುರಿತಾಗಿ ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...

ಜಿಲ್ಲೆಯಲ್ಲಿ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ

ಉಡುಪಿ, ಸೆ.30: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ...
error: Content is protected !!