ಕೆಮ್ಮಣ್ಣು, ಅ.2: ಗಾಂಧಿ ಜಯಂತಿಯ ಅಂಗವಾಗಿ ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಉಡುಪಿಯ ಅಥ್ಲೆಟಿಕ್ ತರಬೇತುದಾರರಾದ ಶಾಲಿನಿ ರಾಜೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಮಕ್ಕಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ನಡೆಸುತ್ತಿರುವುದು ಶ್ಲಾಘನೀಯ ಸಂಗತಿ. ವಿದ್ಯಾರ್ಥಿಗಳು ಕಲಿಕಾ ಅವಧಿಯಲ್ಲಿ ಆರೋಗ್ಯವಂತ ಜೀವನಶೈಲಿಯನ್ನು ರೂಪಿಸಿಕೊಂಡು ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದರು. ಮಾಜಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಂದಕಿಶೋರ್ ಕೆಮ್ಮಣ್ಣು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಡಿಸಿ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ ವಹಿಸಿದ್ದರು, ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ಇದರ ಡಾ. ಗಣೇಶ್ ಪ್ರಸಾದ್ ನಾಯಕ್, ಹಾಗೂ ಅಂತರಾಷ್ಟ್ರೀಯ ಮಟ್ಟದ ಜಾನಪದ ಕಲಾವಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಸಚಿನ್ ಸಾಲಿನ್ ಇವರನ್ನು ಸನ್ಮಾನಿಸಲಾಯಿತು.
ತೋನ್ಸೆ ಕೆಮ್ಮಣ್ಣು ಗ್ರಾಮ ಪಂಚಾಯತ ಕಾರ್ಯದರ್ಶಿ ದಿನಕರ್, ಕಾಲೇಜಿನ ಪ್ರಾಂಶುಪಾಲರಾದ ಲಕ್ಮೀನಾರಾಯಣ, ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ವಂದನಾ, ಕಾರ್ಯಕ್ರಮದ ಸಂಯೋಜಕರಾದ ಉದಯ ಕಂಡಾಳ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತಾರನಾಥ್ ಪೂಜಾರಿ, ಹಾಗೂ ಎಲ್ಲ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕಿ ಶಾಲಿನಿ ಕೆ.ಎನ್. ಕಾರ್ಯಕ್ರಮ ನಿರೂಪಿಸಿದರು. ಆಂಗ್ಲಭಾಷಾ ಅಧ್ಯಾಪಕಿ ಗ್ರೇಸಿ ಬಾಂಜಿ ವಂದಿಸಿದರು.