Monday, February 24, 2025
Monday, February 24, 2025

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ

Date:

ಉಡುಪಿ, ಅ.2: ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿ ಅಧಿಸೂಚನೆ ಹೊರಡಿಸಿದ್ದು ಅದರಂತೆ ಸೆಪ್ಟೆಂಬರ್ 19 ರಿಂದ ಮಾದರಿ ನೀತಿ ಸಂಹಿತ ಜಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಸದರಿ ಚುನಾವಣೆಯ ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28 ರ ವರೆಗೆ ಜಾರಿಯಲ್ಲಿರುತ್ತದೆ. ನವರಾತ್ರಿ ಹಾಗೂ ಶಾರದೋತ್ಸವ ಹಬ್ಬದ ಸಂದರ್ಭಗಳಲ್ಲಿ ದಸರಾ ಆಚರಣೆಯ ಕಾರ್ಯಕ್ರಮವನ್ನು ನಡೆಸುವಂತಹ ಆಯೋಜಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾಧಿಕಾರಿಗಳ ನಿರ್ದೇಶನದಂತೆ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!