Wednesday, November 18, 2026
Wednesday, November 18, 2026

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ

Date:

ಉಡುಪಿ, ಅ.2: ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿ ಅಧಿಸೂಚನೆ ಹೊರಡಿಸಿದ್ದು ಅದರಂತೆ ಸೆಪ್ಟೆಂಬರ್ 19 ರಿಂದ ಮಾದರಿ ನೀತಿ ಸಂಹಿತ ಜಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಸದರಿ ಚುನಾವಣೆಯ ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28 ರ ವರೆಗೆ ಜಾರಿಯಲ್ಲಿರುತ್ತದೆ. ನವರಾತ್ರಿ ಹಾಗೂ ಶಾರದೋತ್ಸವ ಹಬ್ಬದ ಸಂದರ್ಭಗಳಲ್ಲಿ ದಸರಾ ಆಚರಣೆಯ ಕಾರ್ಯಕ್ರಮವನ್ನು ನಡೆಸುವಂತಹ ಆಯೋಜಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾಧಿಕಾರಿಗಳ ನಿರ್ದೇಶನದಂತೆ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...

ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ದತ್ತಿ ನಿಧಿ ಸ್ಥಾಪನೆ

ಮಂಗಳೂರು, ನ.17: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!