Sunday, January 19, 2025
Sunday, January 19, 2025

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

Date:

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಕನ್ನಡ ದಿನಪತ್ರಿಕೆ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಮೊದಲಿಗೆ ಮಣಿಪಾಲ ಮ್ಯೂಸಿಯಂಗೆ ಭೇಟಿ ನೀಡಿದ ವಿದ್ಯಾರ್ಥಿಗಳು, ಪ್ರಾಣಿಗಳು ಮತ್ತು ಮಾನವರ ವಿವಿಧ ಅಂಗರಚನಾ ರಚನೆಗಳನ್ನು ಮತ್ತು ವಿಶೇಷವಾಗಿ ಮಾನವರ ವಿವಿಧ ರೋಗಶಾಸ್ತ್ರಕ್ಕೆ ಸಂಬಂಧಿಸಿದ ಮಾದರಿಗಳನ್ನು ವೀಕ್ಷಿಸಿದರು. ಭೇಟಿಯು ಉತ್ಕೃಷ್ಟ ಪ್ರೇರಕ ಅನುಭವವಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸಿತು. ನಂತರ ಉದಯವಾಣಿ ದಿನಪತ್ರಿಕೆ ಕಚೇರಿಗೆ ಭೇಟಿ ನೀಡಿ ಸ್ಥಾನೀಯ ಸಂಪಾದಕ ಕೃಷ್ಣ ಭಟ್‌ರೊಂದಿಗೆ ಸಂವಾದ ನಡೆಸಿದರು. ಆ ಬಳಿಕ ಕಚೇರಿಯ ಸಿಬ್ಬಂದಿ ವರ್ಗದವರು ಪತ್ರಿಕೆಯ ವಿವಿಧ ಅಂಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಉದಯವಾಣಿ ಡಿಜಿಟಲ್‌ನ ಸಿಬ್ಬಂದಿ ಡಿಜಿಟಲ್ ವಿಭಾಗದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮುದ್ರಣ ವಿಭಾಗದ ಸಿಬ್ಬಂದಿ ಮುದ್ರಣ ತಂತ್ರಜ್ಞಾನ ಹಾಗೂ ಪ್ರಕ್ರಿಯೆಯನ್ನು ವಿವರಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ರಕ್ಷಿತಾ ತೋಡಾರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಜೋಶ್ವಿತಾ ಡೆಸಾ, ಉಪನ್ಯಾಸಕರಾದ ವಿವೇಕ್ ಜತೆಗಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!