Monday, January 20, 2025
Monday, January 20, 2025

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

Date:

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ. ಸುತ್ತಲಿನ ಪರಿಸರಕ್ಕೆ, ಸಮಾಜಕ್ಕೆ, ಸ್ಪಂದಿಸುತ್ತಾ, ಸಮಾಜಮುಖಿಯಾಗಿ ಬದುಕುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಉಡುಪಿ ಇವರ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎನ್.ಎಸ್.ಎಸ್ ನಂತಹ ಘಟಕಗಳು ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು ರೂಪಿಸಿಕೊಳ್ಳಲು ಪ್ರೇರೇಪಿಸುತ್ತವೆ. ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾದ ಮಲ್ಪೆಯ ಸ.ಪ.ಪೂ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲ ಸಿ ಬಂಗೇರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಹೊಂದಲು ಇಂತಹ ಶಿಬಿರಗಳು ಸಹಕಾರಿಯಾಗಿದೆ. ವಿದ್ಯೆ ಕಲಿಸಿದ ಗುರುಗಳಿಗೆ ನಮ್ಮ ಸಮಾಜದಲ್ಲಿ ಉನ್ನತ ಸ್ಥಾನವಿದೆ. ಅವರನ್ನು ಗೌರವಿಸಿ, ಅವರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದರು.

ಮಲ್ಪೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ಪಿ ಮಾತನಾಡಿ, ಶಿಬಿರದಲ್ಲಿ ವಿದ್ಯಾರ್ಥಿಗಳು ಶಿಸ್ತು ಪಾಲಿಸಿ, ಶಿಬಿರದಲ್ಲಿ ಕಲಿತಿದ್ದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಗುರು-ಹಿರಿಯರನ್ನು ಗೌರವಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಯುವ ಪೀಳಿಗೆಯ ಪಾತ್ರ ಮಹತ್ವದ್ದಾಗಿದ್ದು, ಸದೃಢ ದೇಶ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಮುಖ್ಯೋಪಾಧ್ಯಾಯಿನಿ ಸಂಧ್ಯಾ, ಮಲ್ಪೆ ಸ.ಪ.ಪೂ ಕಾಲೇಜು (ಪ್ರೌಢಶಾಲಾ ವಿಭಾಗ) ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಗದೀಶ್ ಸಾಲ್ಯಾನ್, ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ಕೆ ಕೋಟ್ಯಾನ್, ಬಾಲಕಿಯರ ಸ.ಪ.ಪೂ. ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಸದಸ್ಯೆ ಸುಮಾ ಆನಂದ ನಾಯ್ಕ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ಬಾಲಕಿಯರ ಸ.ಪ.ಪೂ. ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಖಜಾಂಜಿ ಶೇಖರ್ ಕೋಟ್ಯಾನ್, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಮಲ್ಪೆ ಶಾಖೆಯ ಪ್ರಬಂಧಕ ನವೀನ್ ಕೆ, ಜನರಲ್ ಮ್ಯಾನೆಜರ್ ರಾಜೇಶ್, ಉಪನ್ಯಾಸಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಶಿಬಿರಾಧಿಕಾರಿ ಭವ್ಯಾ ನಾಗರಾಜ್ ಸ್ವಾಗತಿಸಿ, ಹಿರಿಯ ಉಪನ್ಯಾಸಕಿ ಡಾ. ಸುಮಾ ಎಸ್ ನಿರೂಪಿಸಿದರೆ, ಆಂಗ್ಲ ಭಾಷಾ ಉಪನ್ಯಾಸಕ ಗಂಗಾಧರ ವಂದಿಸಿದರು. ಶಿಬಿರವು ಅಕ್ಟೋಬರ್ 9 ರ ವರೆಗೆ ನಡೆಯಲಿದ್ದು, ಶಿಬಿರದಲ್ಲಿ ವಿದ್ಯಾ ಸಂಸ್ಥೆಯ ಸುತ್ತಮುತ್ತಲಿನ ಜಾಗ ಮತ್ತು ಮೈದಾನದ ಸ್ವಚ್ಛತೆ, ಪ್ಲಾಸ್ಟಿಕ್ ರಹಿತ ಪರಿಸರದ ಅರಿವು ಮತ್ತು ನಿರ್ವಹಣಾ ಕ್ರಮಗಳು, ಕರಕುಶಲ ತರಬೇತಿ, ಜೀವನ ಮೌಲ್ಯಗಳ ಕುರಿತ ಕಾರ್ಯಕ್ರಮಗಳು ನಡೆಯಲಿವೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!