Saturday, October 5, 2024
Saturday, October 5, 2024

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Date:

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕಿರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ ರೂ. 1,000/- ಪ್ರೋತ್ಸಾಹಧನ ನೀಡುವ ಸಲುವಾಗಿ ಜಿಲ್ಲಾಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕಿರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ವಿಶಿಷ್ಟ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತ ಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಆರೈಕೆದಾರರ ಬ್ಯಾಂಕ್/ಅಂಚೆ ಕಛೇರಿ ಉಳಿತಾಯ ಖಾತೆಗೆ ಪ್ರೋತ್ಸಾಹಧನವನ್ನು ಜಮೆ ಮಾಡಲಾಗುವುದು. ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಅಕ್ಟೋಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ದೂರವಾಣಿ ಸಂಖ್ಯೆ: 0820-2574810 ಹಾಗೂ ಎಂ.ಆರ್.ಡಬ್ಲೂ ಅಥವಾ ವಿ.ಆರ್.ಡಬ್ಲೂ/ ಯು.ಆರ್.ಡಬ್ಲೂ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ರಜಾ ಸಂಸ್ಕಾರ ಶಿಬಿರ ಸಮಾರೋಪ

ಕೋಟ, ಅ.5: ಶಿಬಿರಗಳು ಅರ್ಥಪೂರ್ಣವಾಗಬೇಕು, ಅದು ಕೇವಲ ದೈಹಿಕವಲ್ಲದೆ ಮನೋವಿಕಾಸಕ್ಕೆ ನಾಂದಿಯಾಗಬೇಕು...
error: Content is protected !!