Tuesday, January 28, 2025
Tuesday, January 28, 2025

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

Date:

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಚಿತ್ರಕಲೆಯ ಮೂಲಕ ಬಾಲ್ಯದಿಂದಲೇ ಸನಾತನ ಧರ್ಮದ ಧಾರ್ಮಿಕ ಪ್ರಜ್ಞೆ, ಸೃಜನಶೀಲತೆ ಬೆಳೆಸಲು ಈ ಸ್ಪರ್ಧೆ ಸಹಕಾರಿಯಾಗಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾರಂಭದ ಉದ್ಘಾಟನೆ ನೆರವೇರಿಸಿದ ನಾಡೋಜ ಡಾ. ಜಿ. ಶಂಕರ್ ಮಾತನಾಡಿ ಮಹಾಲಕ್ಷ್ಮೀ ಬ್ಯಾಂಕ್ ಉಚ್ಚಿಲ ದಸರಾ ಮಹೋತ್ಸವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ನೀಡುತ್ತಿದ್ದು ಪ್ರತಿವರ್ಷ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸುತ್ತಿರುವುದು ಅಭಿನಂದನಾರ್ಹ ಎಂದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ವತಿಯಿಂದ ಕೇಕ್ ಕತ್ತರಿಸುವ ಮೂಲಕ ನಾಡೋಜ ಡಾ ಜಿ. ಶಂಕರ್ ರವರ ಹುಟ್ಟು ಹಬ್ಬವನ್ನು ಆಚರಿಸಿ, ಪುಟಾಣಿ ಮಕ್ಕಳು ಗುಲಾಬಿ ಹೂ ನೀಡಿ ಶುಭಾಶಯ ಕೋರಿದರು. ಚಿತ್ರಕಲಾ ಸ್ಪರ್ಧೆಯಲ್ಲಿ 575 ಮಂದಿ ಭಾಗವಹಿಸಿದ್ದು, ತೀರ್ಪುಗಾರರಾಗಿ ಹಿರಿಯ ಕಲಾವಿದರಾದ ರಮೇಶ್ ಕಿದಿಯೂರು, ಶೇಖರ್ ಕಲಾಪ್ರತಿಭಾ, ಶ್ರೀಧರ್ ತೊಟ್ಟಂ ಸಹಕರಿಸಿದರು.

ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷರಾದ ಬಬಿತಾ ಅರಸ್, ಬ್ಯಾಂಕಿನ ಉಪಾಧ್ಯಕ್ಷರಾದ ವಾಸುದೇವ ಸಾಲ್ಯಾನ್, ವ್ಯವಸ್ಥಾಪನಾ ನಿರ್ದೇಶಕರಾದ ಶರತ್ ಕುಮಾರ್ ಶೆಟ್ಟಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಾರಿಕ ಕಿರಣ್ ಉಪಸ್ಥಿತರಿದ್ದರು. ಬ್ಯಾಂಕಿನ ಸಿಬ್ಬಂದಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ...

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ವಾರ್ಷಿಕ ಭಜನಾ ಮಂಗಲೋತ್ಸವ

ಕಾರ್ಕಳ, ಜ.27: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ...

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್

ಬೆಂಗಳೂರು, ಜ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಭೂ ಮಂಜೂರಾತಿಗೆ ಸಂಬಂಧಿಸಿದ...
error: Content is protected !!