Sunday, October 6, 2024
Sunday, October 6, 2024

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಜತ ವರ್ಷಾಚರಣೆಗೆ ಚಾಲನೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಜತ ವರ್ಷಾಚರಣೆಗೆ ಚಾಲನೆ

Date:

ಉಡುಪಿ, ಅ.6: ನಿರಂತರ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಧಾರ್ಮಿಕ, ಶೈಕ್ಷಣಿಕ, ಸ್ವಚ್ಛತೆ, ಸಾಹಿತ್ಯ ಮುಂತಾದ ಹಲವಾರು ಕ್ಷೇತ್ರದಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿರುವ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಸ್ಥೆಯು 25ನೇ ವರ್ಷಕ್ಕೆ ಪಾದಾರ್ಪಣೆಯಾದ ನಿಟ್ಟಿನಲ್ಲಿ ರಜತ ವರ್ಷಾಚರಣೆಗೆ ಚಾಲನೆ, 25ನೇ ವರ್ಷದ ಸ್ಥಾಪನಾ ದಿನಾಚರಣೆ, ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ, ಮಾಜಿ ಪ್ರಧಾನಿ ಲಾಲ್ ಬಹೂದ್ದೂರ್ ಶಾಸ್ತ್ರಿ ಜಯಂತಿ, ಸೇವಾ ಸಂಸ್ಥೆಗಳಿಗೆ ಗೌರವಾರ್ಪಣೆ, ಭಜನಾ ಮಂಡಳಿಗಳಿಗೆ ಸನ್ಮಾನ, ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ, ಸಂಘದ ಹಾಡು ಬಿಡುಗಡೆ ಕಾರ್ಯಕ್ರಮ ಜರಗಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರು ಮತ್ತು ಯಕ್ಷರಂಗದ ಚಾರ್ಲಿ ಚಾಪ್ಲಿನ್ ಖ್ಯಾತಿಯ ಸೀತಾರಾಮ್ ಕುಮಾರ್ ಕಟೀಲು ಅವರು ರಜತ ವರ್ಷಾಚರಣೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಅವರು ರಜತ ವರ್ಷದ ಲಾಂಛನ ಬಿಡುಗಡೆ ಮಾಡಿ ಶುಭ ಹಾರೈಸಿದರು. ಭಾರತೀಯ ಜೇಸಿಐನ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಕೆ ಅವರು ದಿಕ್ಸೂಚಿ ಭಾಷಣ ಮಾಡಿದರು. ಮಂಗಳೂರು ಕೇಂದ್ರ ಸಮಿತಿ ಕರಾವಳಿ ಭಜನಾ ಸಂಸ್ಕಾರ ವೇದಿಕೆಯ ಪ್ರಧಾನ ಕಾರ್ಯದರ್ಶಿಗಳಾದ ಎರ್ಲಪಾಡಿ ಶ್ರೀನಿವಾಸ ಪೂಜಾರಿ ಅವರು ಸಂಘದ ಹಾಡು ಬಿಡುಗಡೆ ಮಾಡಿದರು. ಬೆಳ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನ ಅಧ್ಯಾಪಕರಾದ ಜಯಂತಿ ಆರ್. ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಪ್ರಥ್ವಿರಾಜ್ ಬಲ್ಲಾಳ್ ಅವರನ್ನು ಸನ್ಮಾನಿಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಿದರು, ಸಂಘದ ಸದಸ್ಯರಾದ ಪದ್ಮಶ್ರೀ ಪೂಜಾರಿ, ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್ ಅವರು ಪ್ರಾರ್ಥನೆಗೈದರು, ನಿಕಟಪೂರ್ವ ಕಾರ್ಯದರ್ಶಿ ವೀಣಾ ಪೂಜಾರಿ ಸ್ವಾಗತಿಸಿದರು, ನಿಕಟಪೂರ್ವಾಧ್ಯಕ್ಷ ಪ್ರಶಾಂತ್ ಪೂಜಾರಿ ಸನ್ಮಾನಿತರ ಪರಿಚಯ ವಾಚಿಸಿದರು, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ ಸಾಧಕ ವಿದ್ಯಾರ್ಥಿಗಳ ಪರಿಚಯ ವಾಚಿಸಿದರು, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!