Tuesday, February 25, 2025
Tuesday, February 25, 2025

ಪ್ರತಿಭೆಯನ್ನು ಗ್ರಹಿಸಿ ಅಭಿನಂದಿಸುವ ಮನೋಭಾವ ಬೆಳೆಸಿಕೊಳ್ಳಿ: ನರೇಂದ್ರ ಎಸ್ ಗಂಗೊಳ್ಳಿ

ಪ್ರತಿಭೆಯನ್ನು ಗ್ರಹಿಸಿ ಅಭಿನಂದಿಸುವ ಮನೋಭಾವ ಬೆಳೆಸಿಕೊಳ್ಳಿ: ನರೇಂದ್ರ ಎಸ್ ಗಂಗೊಳ್ಳಿ

Date:

ಗಂಗೊಳ್ಳಿ, ಅ.9: ಮನುಷ್ಯನ ಹೊರನೋಟದ ಲಕ್ಷಣಗಳಿಂದ ಆತನ ವ್ಯಕ್ತಿತ್ವವನ್ನು ಅಳೆಯುವುದು ಮೂರ್ಖತನ. ಒಬ್ಬರ ಪ್ರತಿಭೆಯನ್ನು ಕೌಶಲ್ಯವನ್ನು ಅರ್ಥಮಾಡಿಕೊಳ್ಳುವ ಮತ್ತು ಅಭಿನಂದಿಸುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಇವರ ಮುತುವರ್ಜಿಯಲ್ಲಿ ನಡೆದ ಕ್ರೀಡಾ ತರಬೇತುದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಯಾವುದೇ ರಂಗದಲ್ಲಿ ಉಪಕಾರ ಮಾಡಿದವರನ್ನು ಸ್ಮರಿಸುವುದು ಮತ್ತು ಗೌರವಿಸುವ ಸಂಪ್ರದಾಯವು ಸಮಾಜದಲ್ಲಿ ಉತ್ತಮ ನಡವಳಿಕೆಯನ್ನು ಪ್ರೋತ್ಸಾಹಿಸುವುದಕ್ಕೆ ನೆರವಾಗುತ್ತದೆ. ಇದು ಎಲ್ಲರ ನಡೆಯಾಗಬೇಕು ಎಂದು ಅವರು ಹೇಳಿದರು. ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆಗಳಲ್ಲಿ ತರಬೇತಿ ನೀಡಿದ ತರಬೇತುದಾರರನ್ನು ಮತ್ತು ಕ್ರೀಡಾಕೂಟಕ್ಕೆ ಪ್ರೋತ್ಸಾಹ ನೀಡಿದವರನ್ನು ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿ ಕ್ರೀಡಾ ಪ್ರತಿಭೆಗಳನ್ನು ಅಭಿನಂದಿಸಲಾಯಿತು. ದೈಹಿಕ ಶಿಕ್ಷಣ ಮಾರ್ಗದರ್ಶಕರಾದ ದೀಕ್ಷಿತ್ ಮೇಸ್ತ ಮತ್ತು ಸೂರಜ್ ಸಾರಂಗ ಶುಭ ಹಾರೈಸಿದರು. ಸಹನಾ ಖಾರ್ವಿ ಮತ್ತು ಸಂಜನಾ ಖಾರ್ವಿ ಪ್ರಾರ್ಥನೆಯನ್ನು ಮಾಡಿದರು. ವಿದ್ಯಾರ್ಥಿನಿ ಕ್ಷಮಾ ಆರ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ಮೇಸ್ತ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!