Tuesday, February 25, 2025
Tuesday, February 25, 2025

ಶ್ರೀ ಕ್ಷೇತ್ರ ಬೆಳ್ಮಣ್ಣು: ನವರಾತ್ರಿ ಉತ್ಸವ

ಶ್ರೀ ಕ್ಷೇತ್ರ ಬೆಳ್ಮಣ್ಣು: ನವರಾತ್ರಿ ಉತ್ಸವ

Date:

ಉಡುಪಿ, ಅ.10: ಇತಿಹಾಸ ಪ್ರಸಿದ್ಧ ಶ್ರೀ ವನದುರ್ಗೆ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದ ಬೆಳ್ಮಣ್ಣು ಶ್ರೀ ದುಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ದುರ್ಗಾಷ್ಟಮಿ ದಿನ ಬೆಳಿಗ್ಗೆ ಶ್ರೀ ದೇವರಿಗೆ ವಿಶೇಷ ಅಲಂಕಾರದೊಂದಿಗೆ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಕೆ. ವಿಘ್ನೇಶ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಪೂಜೆ ನಡೆಯಿತು. ಪ್ರತಿ ದಿನ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ನವರಾತ್ರಿಯ ಪತ್ರಿ ದಿನ ರಾತ್ರಿ ಶ್ರೀ ಕ್ಷೇತ್ರದಲ್ಲಿ ಅನ್ನಸಂತರ್ಪಣೆ ಪ್ರಸಾದ ನಡೆಯುತ್ತಿದೆ. ಅಕ್ಟೋಬರ್ 11 ರಂದು ಶುಕ್ರವಾರ ಶ್ರೀ ಕ್ಷೇತ್ರದಲ್ಲಿ ಮಹಾನವಮಿ ಪ್ರಯುಕ್ತ ಶ್ರೀ ಕ್ಷೇತ್ರದ ಸಭಾಂಗಣದಲ್ಲಿ ಸಂಗೀತ ಸಂಭ್ರಮ, ಸ್ಥಳೀಯ ಪ್ರತಿಭೆಗಳಿಂದ ವಿವಿಧ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಹಾಗೂ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಜರಗಲಿದೆ.

ಅಕ್ಟೋಬರ್ 12 ರಂದು ವಿಜಯ ದಶಮಿ ಪ್ರಯುಕ್ತ ಮಧ್ಯಾಹ್ನ ವಿಶೇಷ ಪೂಜೆ ನಡೆಯಲಿದೆ ಎಂದು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಕೆ. ವಿಘ್ನೇಶ್ ಭಟ್ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!