Monday, January 20, 2025
Monday, January 20, 2025

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Date:

ಕುಂದಾಪುರ, ಅ.10: ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ ಉಳಿಯುವಂತಾಗಬೇಕಾದರೆ ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿಯೂ ಈ ಭಾಷೆಯನ್ನು ಅಳವಡಿಸುವಂತಾಗಬೇಕು ಮತ್ತು ಭಾಷೆಯನ್ನು ಬಳಸಿದಾಗ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಎ.ಎಸ್.ಎನ್. ಹೆಬ್ಬಾರ್ ಹೇಳಿದರು ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕುಂದಗನ್ನಡ ಭಾಷೆಯ ಅನನ್ಯತೆ ಮತ್ತು ಇಲ್ಲಿನ ಸಂಸ್ಕೃತಿಯ ಅಸ್ಮಿತೆಯನ್ನು ಉಳಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕುಂದಗನ್ನಡ ಸಂಘದ ಸಂಯೋಜಕರಾದ ರೇಷ್ಮಾ ಶೆಟ್ಟಿ ಮತ್ತು ಶ್ರೀಮತಿ ಪ್ರವೀಣಾ ಮಹಾಬಲ ಪೂಜಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಶ್ಮಿತಾ ಸ್ವಾಗತಿಸಿ, ವಿಸ್ಮಿತಾ ಅತಿಥಿಗಳನ್ನು ಪರಿಚಯಿಸಿ, ಗಗನ್ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!