Monday, January 20, 2025
Monday, January 20, 2025

ರೆಡ್‌ಕ್ರಾಸ್ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ರೆಡ್‌ಕ್ರಾಸ್ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Date:

ಉಡುಪಿ, ಅ.10: ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ಪ್ರಥಮ ಚಿಕಿತ್ಸಾ ಪಾತ್ರ ಬಹು ದೊಡ್ಡದು. ಇದರ ಅರಿವು ವ್ಯಾಪಕವಾಗಿ ಮೂಡಿಸುವ ಆಗತ್ಯವಿದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ತರಬೇತಿ ಅತ್ಯಗತ್ಯ ಎಂದು ರೆಡ್ ಕ್ರಾಸ್ ರಾಜ್ಯ ಮಂಡಳಿಯ ಸದಸ್ಯ ವಿಜಿ ಶೆಟ್ಟಿ ಹೇಳಿದರು. ಅವರು ಭಾರತಿಯ ರೆಡ್ ಕ್ರಾಸ್ ರಾಜ್ಯ ಶಾಖೆಯ ಆಶ್ರಯದಲ್ಲಿ ಜಿಲ್ಲಾ ರೆಡ್‌ಕ್ರಾಸ್ ಘಟಕ ಮತ್ತು ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ & ಮ್ಯಾನೇಜ್‌ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ನಾರಾಯಣರಾವ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈಜಿ ಪ್ರಥಮ ಚಿಕಿತ್ಸೆಯ ಪ್ರಾಥಮಿಕ ವಿಷಯಗಳ ಬಗ್ಗೆ ಮಾತನಾಡಿದರು. ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ರೆಡ್‌ಕ್ರಾಸ್ ಖಜಾಂಚಿ ರಮಾದೇವಿ, ತ್ರಿಶಾ ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಚೇತನ ಸುನಿಲ್ ಉಪಸ್ಥಿತರಿದ್ದರು. ಪ್ರಥಮ ಚಿಕಿತ್ಸಾ ತರಬೇತುದಾರರಾಗಿ ಅಶ್ವಿನ್ ಕುಮಾರ್, ನೇತ್ರಾವತಿ ಪ್ರಾಯೋಗಿಕ ತರಬೇತಿ ನೀಡಿದರು. ವಿದ್ಯಾರ್ಥಿನಿ ಸ್ನೇಹ ಭಟ್ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾಮಟ್ಟದ ವಿವಿಧ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿ ಗಳು ಶಿಬಿರದಲ್ಲಿ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!