Tuesday, February 25, 2025
Tuesday, February 25, 2025

ದಸರಾ ಸಿಎಂ ಕಪ್ ಬಾಕ್ಸಿಂಗ್‌: ಅನುಶ್ರೀ ನಾಯ್ಕ್ ಅವರಿಗೆ ಬೆಳ್ಳಿ ಪದಕ

ದಸರಾ ಸಿಎಂ ಕಪ್ ಬಾಕ್ಸಿಂಗ್‌: ಅನುಶ್ರೀ ನಾಯ್ಕ್ ಅವರಿಗೆ ಬೆಳ್ಳಿ ಪದಕ

Date:

ಮಣಿಪಾಲ, ಅ.10: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ ದಸರಾ ಸಿಎಂ ಕಪ್ 2024ರಲ್ಲಿ 52-54 ಕೆಜಿ ವಿಭಾಗದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನರ್ಸ್ ಪ್ರಾಕ್ಟೀಷನರ್ ಅನುಶ್ರೀ ನಾಯ್ಕ್ ಬೆಳ್ಳಿ ಪದಕ ಪಡೆದಿದ್ದಾರೆ. ಬಾಕ್ಸಿಂಗ್‌ನಲ್ಲಿ ಸತತವಾಗಿ ತನ್ನ ಪ್ರತಿಭೆಯನ್ನು ಪ್ರದರ್ಶಿಸುತ್ತಿರುವ ಅನುಶ್ರೀ, ಈ ಹಿಂದೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪದಕಗಳನ್ನು ಗೆದ್ದಿದ್ದಾರೆ. ಅವರ ಇತ್ತೀಚಿನ ಸಾಧನೆಯನ್ನು ಗುರುತಿಸಿ, ಕಸ್ತೂರ್ಬಾ ಆಸ್ಪತ್ರೆಯು ಅನುಶ್ರೀ ಅವರನ್ನು ಅಭಿನಂದಿಸಿತು.

ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಮಾತನಾಡಿ, ಅನುಶ್ರೀ ಅವರಿಗೆ ಬಾಕ್ಸಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯವಿದೆ, ಅವರ ಸಾಧನೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಅವರು ಇನ್ನೂ ಹೆಚ್ಚಿನ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಕೀರ್ತಿ ತರಲಿ ಎಂದು ಹಾರೈಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!