Monday, February 24, 2025
Monday, February 24, 2025

ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿ ಸಲ್ಲಿಸುವ ಕುರಿತು

ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿ ಸಲ್ಲಿಸುವ ಕುರಿತು

Date:

ಉಡುಪಿ, ಅ.10: ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಬರುವ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಅಭಿವೃದ್ಧಿ ಪಡಿಸಿರುವ PARIVESH PORTAL 2.0 ನ ಮೂಲಕವೇ ಸಲ್ಲಿಸುವಂತೆ ಸರ್ಕಾರವು ನಿರ್ದೇಶನ ನೀಡಿರುತ್ತದೆ. ಆದ್ದರಿಂದ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ವಾಸ್ತವ್ಯ, ವಾಣಿಜ್ಯ, ಕೈಗಾರಿಕೆ, ಸರ್ಕಾರಿ ಯೋಜನೆಗಳ ಕಟ್ಟಡ ನಿರ್ಮಾಣದ ಪ್ರಸ್ತಾವನೆಗಳನ್ನು ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿಗಳನ್ನು PARIVESH PORTAL 2.0 ನಲ್ಲಿ ಮಾತ್ರ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ PARIVESH PORTAL 2.0 ಬಳಕೆಯ ಬಗ್ಗೆ ಸಂದೇಹಗಳ ನಿವಾರಣೆಗಾಗಿ ಮತ್ತು ಮಾರ್ಗದರ್ಶನಕ್ಕಾಗಿ ಪ್ರಾದೇಶಿಕ ನಿರ್ದೇಶಕರು, (ಪರಿಸರ) ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!