Monday, February 24, 2025
Monday, February 24, 2025

ಬಿ. ಬಿ. ಹೆಗ್ಡೆ ಕಾಲೇಜು: ದಾಂಡಿಯ

ಬಿ. ಬಿ. ಹೆಗ್ಡೆ ಕಾಲೇಜು: ದಾಂಡಿಯ

Date:

ಕುಂದಾಪುರ, ಅ.11: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘ ಹಾಗೂ ಹಿಂದಿ ಸಂಘದ ಜಂಟಿ ಆಶ್ರಯದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ‘ದಾಂಡಿಯ 2024’ ವಿಶೇಷವಾಗಿ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ವಿನೂತನ ಶೈಲಿಯಲ್ಲಿ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿಯನ್ನು ಪರಿಚಯಿಸುವುದರ ಜೊತೆ ಜೊತೆಗೆ ಭವಿಷ್ಯದಲ್ಲಿ ಇಂತಹ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದರ ಬಗ್ಗೆ ತಿಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ- ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಲಲಿತ ಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ರವೀನಾ ಸಿ. ಪೂಜಾರಿ, ನಿರ್ಮಲ ಬಿಲ್ಲವ ಹಾಗೂ ಹಿಂದಿ ಸಂಘದ ಸಂಯೋಜಕರಾದ ಡಾ| ದೀಪಾ ಮತ್ತು ರೇವತಿ ಡಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಮೃದ್ಧಿ ಕಿಣಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!