Monday, February 24, 2025
Monday, February 24, 2025

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಸಮಿತಿಗಳ ಉದ್ಘಾಟನೆ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಸಮಿತಿಗಳ ಉದ್ಘಾಟನೆ

Date:

ಮಂಗಳೂರು, ಅ.11: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಶುಕ್ರವಾರ ಅಡ್ಯಾರ್ ಗಾರ್ಡನ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ 8 ವಿಧಾನಸಭಾ ಸಮಿತಿಗಳ ಉದ್ಘಾಟನಾ ಸಮಾರಂಭ ನಡೆಯಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕ ಕೆ ರಘುಪತಿ ಭಟ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಕಲ್ಯಾ, ಪ್ರಚಾರ ಸಮಿತಿ ಸಂಚಾಲಕರಾದ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ನವದುರ್ಗ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷರಾದ ಕೃಷ್ಣಪ್ರಸಾದ್ ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಕೋಶಾಧಿಕಾರಿ ಕೆ ವಿಶ್ವನಾಥ್, ಸಂಚಾಲಕರಾದ ಸುವರ್ಧನ್ ನಾಯಕ್, ಸಮಿತಿ ಸದ್ಯಸರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!