ಮಲ್ಪೆ, ಅ.12: ಮಲ್ಪೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪರ್ವಕಾಲದಲ್ಲಿ ವಿಶೇಷ ಅಲಂಕಾರ, ಭಜನಾ ಕಾರ್ಯಕ್ರಮ, ಶ್ರೀ ದೇವಿ ಪಾರಾಯಣ, ಹೂವಿನ ಪೂಜೆ, ಹಾಗೂ ವಿವಿಧ ಧಾರ್ಮಿಕ ಪೂಜಾ ವಿಧಾನಗಳನ್ನು ವೇದಮೂರ್ತಿ ಸಂದೇಶ್ ಭಟ್ ನೆರವೇರಿಸಿದರು. ಶುಕ್ರವಾರ ದೇವಳದ ಸಭಾಂಗಣದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ದೇವಳದ ಅಭಿವೃದ್ಧಿಗೆ ಸಹಕರಿಸಿದ ದಾನಿಗಳಿಗೆ ಗೌರವಾರ್ಪಣೆ, ಹಲವು ವರ್ಷಗಳ ಸೇವೆ ಸಲ್ಲಿಸಿದ ಮಹನೀಯರಿಗೆ ಸಮ್ಮಾನ ಮಾಡಿ ಗೌರವಿಸಲಾಯಿತು. ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು. ಆಡಳಿತ ಮೊಕ್ತೇಸರ ಎಂ. ಶಾಂತಾರಾಮ ಪೈ, ರಾಮದಾಸ್ ಭಟ್ ಬನ್ನಂಜೆ, ಕಾರ್ಯದರ್ಶಿ ಉಮೇಶ್ ನಾಯಕ್, ಜಿ.ಎಸ್.ಬಿ ಸೇವಾ ಸಮಾಜದ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರಿದ್ದರು.
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಪೆ: ನವರಾತ್ರಿ ವಿಶೇಷ ಕಾರ್ಯಕ್ರಮ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಪೆ: ನವರಾತ್ರಿ ವಿಶೇಷ ಕಾರ್ಯಕ್ರಮ
Date: