Saturday, October 12, 2024
Saturday, October 12, 2024

ಬಾಂಗ್ಲಾದೇಶ ಅಕ್ರಮ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ: ಯಶ್ಪಾಲ್ ಸುವರ್ಣ

ಬಾಂಗ್ಲಾದೇಶ ಅಕ್ರಮ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ: ಯಶ್ಪಾಲ್ ಸುವರ್ಣ

Date:

ಉಡುಪಿ, ಅ.12: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಏಷ್ಯಾದ ಅತೀ ದೊಡ್ಡ ಮೀನುಗಾರಿಕಾ ಬಂದರಾಗಿ ಗುರುತಿಸಿಕೊಂಡಿರುವ ಮಲ್ಪೆ ಬಂದರಿನಲ್ಲಿ ಕೆಲಸಕ್ಕಾಗಿ ಬಂದು ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಪೊಲೀಸರು ತಕ್ಷಣ ಅಕ್ರಮ ವಲಸಿಗರಿಗೆ ಸಹಕರಿಸಿದವರನ್ನು ತಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕಿದೆ. ಶಿಕ್ಷಣ, ಮೀನುಗಾರಿಕೆ, ಆರೋಗ್ಯ, ಪ್ರವಾಸೋದ್ಯಮ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಉಡುಪಿಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಸಿದ್ದು, ಈ ಜಾಲದ ಹಿಂದಿರುವ ಕಾಣದ ಕೈಗಳನ್ನು ತಕ್ಷಣ ಹೆಡೆಮುರಿ ಕಟ್ಟುವ ಕೆಲಸ ಪೊಲೀಸ್ ಇಲಾಖೆ ನಡೆಸಿ ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸಬೇಕಾಗಿದೆ.

ಮಲ್ಪೆ ಮಾತ್ರವಲ್ಲದೇ ಕರಾವಳಿ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುವ ಅನಿವಾರ್ಯತೆ ಇದ್ದು, ನಕಲಿ ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಮಾಡಿ ಅಕ್ರಮವಾಗಿ ದೇಶದೊಳಗೆ ಕಳುಹಿಸುವ ಜಾಲವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದ ಮೂಲಕವೂ ತನಿಖೆ ನಡೆಸುವ ಬಗ್ಗೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀಕೃಷ್ಣ ಮಠದಲ್ಲಿ ಕದಿರು ಹಬ್ಬ

ಉಡುಪಿ, ಅ.12: ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ...

ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನ: ಶಾರದಾ ದೇವಿ ಸನ್ನಿಧಿಯಲ್ಲಿ ದೀಪಾರಾಧನೆ

ಉಡುಪಿ, ಅ.12: ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ಜಿ.ಎಸ್.ಬಿ...

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಪೆ: ನವರಾತ್ರಿ ವಿಶೇಷ ಕಾರ್ಯಕ್ರಮ

ಮಲ್ಪೆ, ಅ.12: ಮಲ್ಪೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪರ್ವಕಾಲದಲ್ಲಿ ವಿಶೇಷ...

ನವಶಕ್ತಿ

ಹಿಂದೂ ಹಬ್ಬಗಳಲ್ಲಿ ನವರಾತ್ರಿಯು ಪ್ರಸಿದ್ಧವಾದ ಹಬ್ಬವಾಗಿದೆ. ನವರಾತ್ರಿಯು ಪಾರ್ವತಿ ದೇವಿಯ ಒಂಬತ್ತು...
error: Content is protected !!