Sunday, January 19, 2025
Sunday, January 19, 2025

ಶ್ರೀಕೃಷ್ಣ ಮಠದಲ್ಲಿ ಕದಿರು ಹಬ್ಬ

ಶ್ರೀಕೃಷ್ಣ ಮಠದಲ್ಲಿ ಕದಿರು ಹಬ್ಬ

Date:

ಉಡುಪಿ, ಅ.12: ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ ಶನಿವಾರ ನೆರವೇರಿತು. ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣ ಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ಆಸ್ಥಾನ ಪುರೋಹಿತರ ತರಲಾಯಿತು.

ವರ್ಷಕ್ಕೆರಡು ಬಾರಿ ತೆರೆಯುವ ಗರ್ಭಗುಡಿಯ ಮೂಡಣ ದ್ವಾರ: ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳ ತಂದು ಕೃಷ್ಣನ ಮುಂದಿಟ್ಟು ಶ್ರೀಗಳು ಮಂಗಳಾರತಿ ಬೆಳಗಿದರು. ವಿಶೇಷವೆಂದರೆ ಹೊಸ್ತಿಲು ಹುಣ್ಣಿಮೆಯ ದಿನ ಮತ್ತು ಕದಿರಾರೋಹಣದ ದಿನಗಳ ಎರಡು ದಿನಗಳಂದು ಮಾತ್ರ ಗರ್ಭಗುಡಿಯ ಮೂಡಣ ದ್ವಾರ ತೆರೆಯಲಾಗುತ್ತದೆ. ಅಲ್ಲಿಂದ ಕದಿರನ್ನು ಧಾನ್ಯ ಸಂಗ್ರಹಾಗಾರವಿರುವ ಬಡಗುಮಾಳಿಗೆಗೆ ತಂದು ಆರತಿ ಬೆಳಗಲಾಯಿತು. ಉಡುಪಿಯ ಅಷ್ಟ ಮಠಗಳು ಇತರೆ ಮಠಗಳು ಹಾಗೂ ಆಸುಪಾಸಿನ ನೂರಾರು ಮನೆಗಳ ಭಕ್ತರಿಗೆ ಭತ್ತದ ತೆನೆಗಳನ್ನು ಪ್ರಸಾದವಾಗಿ ವಿತರಿಸಲಾಯಿತು. ದಿವಾನರುಗಳಾದ ನಾಗರಾಜ ಆಚಾರ್ಯ, ಪ್ರಸನ್ನಾಚಾರ್ಯ, ವಿದ್ವಾಂಸರುಗಳಾದ ಮಧ್ವರಮಾನಾಚಾರ್ಯ, ಗೋಪಾಲಾಚಾರ್ಯ, ವೇದವ್ಯಾಸ ಪುರಾಣಿಕ, ಪುರೋಹಿತರಾದ ರಾಘವೇಂದ್ರ ಕೊಡಂಚ, ಕೊಟ್ಟಾರಿ ರಾಮ ಕೊಡಂಚ, ನಾಗರಾಜ ತಂತ್ರಿ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!