Friday, September 25, 2026
Friday, September 25, 2026

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

Date:

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶಾರದೋತ್ಸವದ ಶೋಭಾಯಾತ್ರೆ ಶನಿವಾರ ನಡೆಯಿತು. ಉಡುಪಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ರವೀಂದ್ರ ಶೆಟ್ಟಿ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಟಿ.ಜಿ ಹೆಗಡೆ, ವೀಣಾ ಶೆಟ್ಟಿ, ಅಶೋಕ್ ಶೆಟ್ಟಿಗಾರ್, ಶಾರದಾ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಮಟ್ಟು, ಉಪಾಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ಮಲ್ಪೆ, ಸುರೇಶ್ ಶೇರಿಗಾರ್, ಪದ್ಮಾ ರತ್ನಾಕರ್, ತಾರಾ ಆಚಾರ್ಯ, ಉಮೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಅರ್ಚಕರಾದ ದಾಮೋಧರ್ ಭಟ್ ಕರಂಬಳ್ಳಿ ಧಾರ್ಮಿಕ ಪೂಜಾ ವಿಧಾನಗಳನ್ನು ನೆರವೇರಿಸಿದರು. ಶೋಭಾಯಾತ್ರೆಯಲ್ಲಿ ಮಂಗಳವಾದ್ಯ, ಚಂಡೆ, ಕುಣಿತ ಭಜನಾ ತಂಡಗಳು, ತಾಲೀಮ್ ಪ್ರದರ್ಶನ, ನಾಸಿಕ್ ಬ್ಯಾಂಡ್, ವೇದ ಘೋಷ, ಭಜನೆ ಗಮನ ಸೆಳೆಯಿತು. ಜೋಡುಕಟ್ಟೆ, ಹಳೇ ಡಯಾನಾ ಸರ್ಕಲ್ , ಕೆಎಮ್ ಮಾರ್ಗ, ಸರ್ವಿಸ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ ಮುಖ್ಯ ರಸ್ತೆಯಲ್ಲಿ ಸಾಗಿಬಂದು ಶ್ರೀ ಶಂಕರನಾರಾಯಣ ದೇವಳದ ಪುಷ್ಕರಿಣಿಯಲ್ಲಿ ವಿಗ್ರಹದ ಜಲಾಭಿವಾಸ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!