Monday, February 24, 2025
Monday, February 24, 2025

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

Date:

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಇವರು ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌-2024 ರಲ್ಲಿ 18ರ ಒಳಗಿನ ವಯೋಮಾನದ ಬಾಲಕರ ವಿಭಾಗದ 200ಮೀ ಓಟದ ಸ್ಪರ್ಧೆಯಲ್ಲಿ ಪದಕ ವಿಜೇತರಾಗಿ ಆಂದ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ್‌ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್‌
16ರಿಂದ 19ರವರೆಗೆ ನಡೆಯುವ 35ನೇ ಸೌತ್‌ ಝೋನ್‌(ದಕ್ಷಿಣ ಭಾರತ ಮಟ್ಟ) ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌-2024ನಲ್ಲಿ 200ಮೀ. ಓಟ ಮತ್ತು ಮೆಡ್ಲೆ ರಿಲೇಗೆ ಆಯ್ಕೆಗೊಂಡಿದ್ದಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮೀ ದಂಪತಿಗಳ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!