ಉಡುಪಿ, ಅ.15: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂ, ಬಜೆ ನೀರು ಶುದ್ದೀಕರಣ ಘಟಕ (WTP) ಮಣಿಪಾಲ GSLR ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಸದರಿ ನೀರಿನ ಮಾದರಿಯನ್ನು ಪ್ರತೀ ತಿಂಗಳಿಗೊಮ್ಮೆ ಪರೀಕ್ಷಿಸಿ, ನೀರು ಕುಡಿಯಲು ಯೋಗ್ಯವಾಗಿರುವ ಬಗ್ಗೆ ವರದಿಯನ್ನು ಪಡೆಯಲಾಗುತ್ತಿರುತ್ತದೆ. ಆದರೂ ಸಹ ಇತ್ತೀಚಿನ ದಿನಗಳಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಬಣ್ಣ ಬದಲಾಗಿದ್ದು, ಸದರಿ ನೀರು ಕುಡಿಯಲು ಯೋಗ್ಯವಾಗಿದ್ದರೂ ಸಹ ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ ಕುಡಿಯುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ನೀರನ್ನು ಕುದಿಸಿ ಕುಡಿಯುವಂತೆ ಸೂಚನೆ

ನೀರನ್ನು ಕುದಿಸಿ ಕುಡಿಯುವಂತೆ ಸೂಚನೆ
Date: