Thursday, November 21, 2024
Thursday, November 21, 2024

ಡಾ.ವಿಜಯ ಸಂಕೇಶ್ವರ ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ

ಡಾ.ವಿಜಯ ಸಂಕೇಶ್ವರ ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ

Date:

ಕೋಟ, ಅ.16: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ನಡೆಯುವ ಸದ್ಭಾವನಾ 2024 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು ಈ ಬಾರಿ ನವೆಂಬರ್ 16 ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ 20 ಸಾವಿರ ಮೌಲ್ಯದ ಬೆಳ್ಳಿ ಫಲಕ, ನಗದು ಒಳಗೊಂಡಿದೆ. ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡಕ್ಕೆ ನೀಡಲಾಗುವುದು.

ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ, ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಆಹ್ವಾನಿತರಾಗಿ ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಎಸ್ ದೊಡ್ಡಣ್ಣ, ಗಂಗಾವತಿ ಶಾಸಕ ಗಾಲಿ ಜನರ್ದನ ರೆಡ್ಡಿ ಉಪಸ್ಥಿತರಿರಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಯೂರಿ ನೃತ್ಯ ತಂಡ ಕುಂಭಾಶಿ, ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಅವಿಭಜಿತ ಜಿಲ್ಲೆಗಳ ಪ್ರಸಿದ್ಧ ನಾಟಕ ತಂಡ ಪಿಂಗಾರ್ ಕಲಾವಿದರ್ ಬಿದ್ರೆ ಇವರ ಸಾಮಾಜಿಕ ಪೌರಾಣಿಕ ಹಿನ್ನಲ್ಲೆಯಯಳ್ಳ ಹಾಸ್ಯಮಯ ಕದಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ಹಾಗೂ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾರಕೂರು ಕಾಲೇಜು: ಕನಕದಾಸ ಜಯಂತಿ

ಬಾರಕೂರು, ನ.21: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ...

ಪ್ರೊಫೆಶನಲ್ ಕೋರ್ಸ್ಗಳು ವಿದ್ಯಾರ್ಥಿಗಳಿಗೆ ಬಹುಮುಖ್ಯ: ಚಂದನ್ ರಾವ್

ಮಣಿಪಾಲ, ನ.21: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪ್ರೊಫೆಶನಲ್ ಕೋರ್ಸ್ಗಳು ಬಹಳ...

ನ.25: ಅರ್ಚನ ಎಂ.ಸಿ ಅವರ ನೃತ್ಯಶಂಕರ ಕಾರ್ಯಕ್ರಮ

ಉಡುಪಿ, ನ.21: ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು...
error: Content is protected !!