Monday, February 24, 2025
Monday, February 24, 2025

ಕಾಲುಬಾಯಿ ಲಸಿಕೆ ಕಾರ್ಯಕ್ರಮದಲ್ಲಿ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ

ಕಾಲುಬಾಯಿ ಲಸಿಕೆ ಕಾರ್ಯಕ್ರಮದಲ್ಲಿ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ

Date:

ಉಡುಪಿ, ಅ.16: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದರು.

ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು. ಐದನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,15,401 ಜಾನುವಾರುಗಳ ಗುರಿ ನಿಗದಿಪಡಿಸಿ, 2,08,558 ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಶೇ. 96.82 ರಷ್ಟು ಪ್ರಗತಿ ಸಾಧಿಸಿದ್ದು, ಆರನೇ ಸುತ್ತಿನಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು. ಕಾಲುಬಾಯಿ ರೋಗದ ಕುರಿತ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ,ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!