Monday, February 24, 2025
Monday, February 24, 2025

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ

Date:

ಕೋಟ, ಅ.16: ಸ್ವಾತಂತ್ರ್ಯ ಹೋರಾಟಗಾರರ ನೆನಪು ಸ್ವಾತಂತ್ರ್ಯೋತ್ಸವ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ. ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವುದು ಕುಟುಂಬಸ್ಥರ ತ್ಯಾಗವನ್ನು ಸ್ಮರಿಸಿಕೊಳ್ಳವುದು ಅಗತ್ಯದ ವಿಷಯವಾಗಿದೆ. ಈ ದಿಸೆಯಲ್ಲಿ ಈ ಕಾರ‍್ಯಕ್ರಮ ಶ್ಲಾಘನೀಯ ಮತ್ತು ಅನುಕರಣೀಯವಾಗಿದೆ ಎಂದು ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ (ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್ ಪ್ರಸ್ತುತಿ ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ, ಜಿಲ್ಲಾಮಟ್ಟದ ಚಿತ್ರರಚನೆ ಮತ್ತು ಕಾರಂತರ ಕೃತಿಗಳ ಹೆಸರು ಬರೆಯುವ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಆನಂದ ಸಿ ಕುಂದರ್‌ ರವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವಂತಾಗಲಿ ಎಂದು ಹಾರೈಸಿ ಕುಟುಂಬಸ್ಥರನ್ನು ಗೌರವಿಸಿದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷರಾದ ತಿಮ್ಮ ಪೂಜಾರಿ, ಸ್ವರಾಜ್ ೭೫ರ ಸಂಘಟಕ ಪ್ರದೀಪ್ ಕುಮಾರ್ ಬಸ್ರೂರು, ಟ್ರಸ್ಟಿಗಳಾದ ಸುಬ್ರಾಯ ಆಚಾರ್ ಮಣೂರು, ಸುಶೀಲಾ ಸೋಮಶೇಖರ್ ಉಪಸ್ಥಿತರಿದ್ದರು. ಸತೀಶ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ವಂದಿಸಿದರು. ಕಾರ‍್ಯಕ್ರಮದ ಬಳಿಕ ಕುಟುಂಬಸ್ಥರೊಂದಿಗೆ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿವೇಕ ಬಾಲಕಿಯರ ಪ್ರೌಢಶಾಲೆಯ ಸಮಾಜವಿಜ್ಞಾನ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಸಂವಾದ ನಡೆಸಿ ಕೊಟ್ಟರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!