Tuesday, September 1, 2026
Tuesday, September 1, 2026

ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Date:

ಕುಂದಾಪುರ, ಅ.16: ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿನ ಮಾದಕ ದ್ರವ್ಯ ವಿರೋಧಿ ಘಟಕ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವಿರೋಧಿ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಂಡ್ಲೂರು ಗ್ರಾಮಾಂತರ ಪೋಲಿಸ್ ಠಾಣೆಯ ಆರಕ್ಷಕ ನೀರೀಕ್ಷಕರಾದ ಭೀಮಾ ಶಂಕರ್ ಸಿನ್ನೂರ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಆಪಘಾತ, ಪ್ರಾಣಹಾನಿ ಸಂಭವಗಳು ಕಡಿಮೆ ಮಾಡಲು ಸಾಧ್ಯ ಎಂದರು. ಮಾದಕ ದ್ರವ್ಯ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು, ಕಾನೂನಿನಲ್ಲಿ ಇರುವ ಶಿಕ್ಷೆ ಮತ್ತು ಸೈಬರ್ ಕೇಸ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ರವಿಚಂದ್ರ, ಐಕ್ಯೂಎಸಿ ಸಂಯೋಜಕರಾದ ಸಂದೀಪ್ ಕೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ರಾಘವೇಂದ್ರ ಶೆಟ್ಟಿ ಎಸ್ ನಿರೂಪಿಸಿ, ದೀಪಕ್ ಕುಮಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!