Tuesday, October 13, 2026
Tuesday, October 13, 2026

ಉಡುಪಿ: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ

ಉಡುಪಿ: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ

Date:

ಉಡುಪಿ, ಅ.16: ಅಕ್ಟೋಬರ್ 24, 25 ಮತ್ತು 26 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯದ ಉದ್ಘಾಟನೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಜೊತೆಯಾಗಿ ಗೀತಾಮಂದಿರದಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಪಾದರು, ಈ ಸಮ್ಮೇಳನವು ಸರ್ವರ ಸಹಕಾರದಿಂದ ವೈಭವೋಪೇತವಾಗಿ ಯಶಸ್ವಿಯಾಗಿ ನಡೆಯುವಂತಾಗಲಿ. ಜಗತಗತ್ತಿನೆಲ್ಲೆಡೆ ತತ್ವಾಜ್ಞಾನ ಪಸರಿಸುವಂತಾಗಲಿ ಎಂದು ಆಶೀರ್ವದಿಸಿದರು.

ಖ್ಯಾತ ಅಂಕಣಕಾರ, ವಾಗ್ಮೀ ರಾಷ್ಟ್ರಿಯವಾದೀ ರವೀಂದ್ರ ಜೋಷಿ, ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ವಿದ್ವಾನ್ ಪ್ರಸನ್ನ ಆಚಾರ್ಯ, ಪತಂಜಲಿ ಯೋಗ ಸಂಸ್ಥೆಯ ಪದಾಧಿಕಾರಿಗಳು, ಸಂಸ್ಕೃತ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಡಾ. ಗೋಪಾಲ ಆಚಾರ್ಯ ಸ್ವಾಗತಿಸಿ, ಡಾ.ಷಣ್ಮುಖ ಹೆಬ್ಬಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!