Wednesday, July 29, 2026
Wednesday, July 29, 2026

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

Date:

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ಕುಂದಾಪುರ ಆಯೋಜನೆಯಲ್ಲಿ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಿತು. ಹಲವು ಬಾರಿ ರಕ್ತದಾನ ಮಾಡಿದ ಮೂವರು ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೋಡ್ಗಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕುಂದಾಪುರ ಪುರಸಭೆ ಅಧ್ಯಕ್ಷ ಮೊಹಾನದಾಸ್ ಶೆಣೈ, ಕುಂದಾಪುರ ಸರ್ಕಾರಿ ಆಸ್ಪತ್ರೆಯ ಡಾ| ನಾಗೇಶ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪು ಸಭಾಪತಿ ಜಯಕರ್ ಶೆಟ್ಟಿ, ಡಾ| ವೇದಮೂರ್ತಿ ಗಾಯತ್ರಿ ಚೆನ್ನಕೇಶವ ಭಟ್, ಲಯನ್ಸ್ ಕ್ಲಬ್, ಹಂಗಳೂ ಅಧ್ಯಕ್ಷ ರೋವನ್ ಡಿ’ಕೋಸ್ಟ ಮುಂತಾದವರು ಉಪಸ್ಥಿತರಿದ್ದರು. ರಕ್ತದಾನ ಶಿಬಿರದಲ್ಲಿ 130 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!