Tuesday, November 17, 2026
Tuesday, November 17, 2026

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

Date:

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ ಉಳುಮೆಗಾರರ ಮಕ್ಕಳಾದ ನಾವು ಅಕ್ಷರದ ಆವರಣವನ್ನೂ ಉಳುಮೆಯ ಹೊಲಗಳೆಂದೇ ಪರಿಭಾವಿಸಿ ಪರಿಪೂರ್ಣ ಉಳುಮೆಯಲ್ಲಿ ತೊಡಗಿಕೊಳ್ಳುವ ಮೂಲಕ ನಮ್ಮ ಬಾಳಬಟ್ಟೆಯ ನಾಳೆಗೆ ಬೇಕಾದ ಪೈರನ್ನು ನಾವೇ ರೂಪಿಸಿಕೊಳ್ಳಬಲ್ಲೆವು ಎಂದು ಮಂಗಳೂರು ವಿಶ್ವವಿದ್ಯಾಲಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ನಾಗಪ್ಪ ಗೌಡ ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ ನಡೆದ ‘ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ’ವನ್ನು ಉದ್ಘಾಟಿಸಿ ಮಾತನಾಡಿದರು. ಹಳೆಗನ್ನಡವನ್ನು ಕಬ್ಬಿಣದ ಕಡಲೆ ಎಂದೇ ಕರೆದು ಅದನ್ನು ಸಾಮಾನ್ಯರ ಮಕ್ಕಳಿಂದ ದೂರಮಾಡಿದ ಪ್ರತಿಭೆಯ ರಾಜಕಾರಣವನ್ನು ಅರ್ಥಮಾಡಿಸಿ, ನಿರ್ಭೀತವಾಗಿಯೇ ಹೊಕ್ಕು ಆ ಪಠ್ಯಗಳ ಜೀವನಮೌಲ್ಯವನ್ನು ಅರಿಯುವ ಸರಿಯಾದ ಬಿಚ್ಚಿಕಟ್ಟುವಿಕೆಯನ್ನು ಸಾಧ್ಯವಾಗಿಸುವ ಕಬ್ಬದುಳುಮೆಯಂತಹ ಕಮ್ಮಟಗಳ ಕಡೆಗೆ ಶಿಕ್ಷಣ ಸಂಸ್ಥೆಗಳು ಕರ‍್ಯೋನ್ಮುಖವಾಗುವ ಅಗತ್ಯವಿದೆ ಎಂದವರು ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ವಿಭಾಗ ಮುಖ್ಯಸ್ಥ ಜಯಪ್ರಕಾಶ್ ಶೆಟ್ಟಿಯವರು ಪ್ರಾಚೀನ ಕನ್ನಡವನ್ನೂ ಇಂದಿನ ಬದುಕಿನೊಂದಿಗೆ ಸಂಧಿಸಿಕೊಂಡು ಓದುವ ಓದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಕಮ್ಮಟದ ಉದ್ದೇಶವನ್ನು ಪರಿಚಯಿಸಿದರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಅವರು ವಹಿಸಿದ್ದರು. ಐಕ್ಯೂಎಸಿ ಸಂಚಾಲಕಿ ಮೇವಿ ಮಿರಾಂದ, ಕನ್ನಡ ಸಹಾಯಕ ಪ್ರಾಧ್ಯಾಪಕಿ ರತ್ನಮಾಲ, ಅರ್ಚನ ಹಾಗೂ ಶಾಲಿನಿ ಉಪಸ್ಥಿತರಿದ್ದರು. ರಶ್ಮಿತ ಸ್ವಾಗತಿಸಿ, ಪ್ರಕೃತಿ ವಂದಿಸಿದರು. ನೈನಾ ಜೆ ಶೆಟ್ಟಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಐಶ್ವರ್ಯ ಜೆ ನಾಯ್ರಿ

ಕೋಟ, ನ.17: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ)...

ಯಕ್ಷಗಾನ ಕಲಾವಿದರ ಕುರಿತ ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ

ಕುಂದಾಪುರ, ನ.17: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ನ.17: ಜಿಲ್ಲಾಮಟ್ಟದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಇದೇ ಡಿಸೆಂಬರ್ 3...

ಕಲಾವಿದರೆಂದರೆ ಕಲಾತಪಸ್ವಿಗಳು: ಪೇಜಾವರ ಶ್ರೀ

ಉಡುಪಿ, ನ.16: ತಮ್ಮ ಬದುಕನ್ನೇ ಯಕ್ಷಗಾನಕ್ಕೆ ಮುಡಿಪಾಗಿಟ್ಟು ಕಲಾರಸಿಕರನ್ನು ರಂಜಿಸಿ ಯಕ್ಷಗಾನವನ್ನು...
error: Content is protected !!