ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಮಹಿಳಾ ಘಟಕ ಉಡುಪಿ ಜಿಲ್ಲೆ, ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ತೋಟದ ಮನೆ ಕೊಡವೂರು, ಎಪಿಎಂಸಿ ರಕ್ಷಣಾ ಸಮಿತಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಗರಸಭಾ ಸದಸ್ಯ ಕೆ ವಿಜಯ್ ಕೊಡವೂರು ಸಂಯೋಜನೆಯಲ್ಲಿ ದೀಪಾವಳಿ ಪ್ರಯುಕ್ತ ಸಾಂಪ್ರದಾಯಿಕ ಕಡ್ಡಿಯಿಂದ ಮಾಡಿದ ಗೂಡು ದೀಪಗಳನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಗೂಡುದೀಪ ಪ್ರದರ್ಶನ ಮತ್ತು ಮಾರಾಟ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ತೋಟದ ಮನೆ ಕೊಡುವೂರು ಇಲ್ಲಿ ಅಕ್ಟೋಬರ್ 27 ಭಾನುವಾರ ಬೆಳಿಗ್ಗೆ 8.30 ರಿಂದ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ತಾರಾ ಸತೀಶ್. 9449920191 ರಂಜಿತ್ 7676213368 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.