Sunday, January 19, 2025
Sunday, January 19, 2025

ಭತ್ತಕ್ಕೆ ಬೆಂಬಲ ಬೆಲೆ ನೀಡದಿದ್ದರೆ ಹೋರಾಟ ಅನಿವಾರ್ಯ: ಎಂ.ಜಯರಾಮ್ ಶೆಟ್ಟಿ

ಭತ್ತಕ್ಕೆ ಬೆಂಬಲ ಬೆಲೆ ನೀಡದಿದ್ದರೆ ಹೋರಾಟ ಅನಿವಾರ್ಯ: ಎಂ.ಜಯರಾಮ್ ಶೆಟ್ಟಿ

Date:

ಕೋಟ, ಅ.19: ರೈತ ಕಾಯಕವೇ ಕ್ಲಿಷ್ಟಕರವಾದದ್ದು ಅದರಲ್ಲಿ ಅಳಿದುಳಿದ ರೈತರು ರೈತಕಾಯಕದಲ್ಲಿ ನಿರತರಾಗಿದ್ದಾರೆ ಆದರೆ ಬೆಳೆದ ಬೆಳೆಗಳ ಲಾಭ ಮಧ್ಯವರ್ತಿಗಳಿಗಾಗುತ್ತಿದೆ. ಈ ದಿಸೆಯಲ್ಲಿ ಪ್ರಸ್ತುತ ಭತ್ತದ ಬೆಳೆಗೆ ನೈಜ ಬೆಲೆ ಸಿಗದಿದ್ದರೆ ರೈತ ಸಮುದಾಯ ಹೋರಾಟಕ್ಕೆ ಧುಮುಕಲಿದೆ ಎಂದು ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ,ವಿಪ್ರ ಮಹಿಳಾ ವಲಯ ಸಾಲಿಗ್ರಾಮ, ಜೆಸಿಐ ಸಿನಿಯರ್ ಲಿಜನ್ ಇವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 40ನೇ ಮಾಲಿಕೆಯಲ್ಲಿ ಅವರು ಮಾತನಾಡಿದರು. ನ್ಯಾಯವಾದಿ ಕೋಟತಟ್ಟು ಪ್ರಮೋದ್ ಹಂದೆ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ನಾವುಗಳು ಕೃಷಿ ಭೂಮಿಗೆ ವಿಷಕಾರಕ ವಸ್ತುಗಳನ್ನು ಅತಿಯಾಗಿ ಬಳಸುತ್ತಿದ್ದೇವೆ ಇದು ಮನುಷ್ಯನ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬಿರುತ್ತಿದೆ. ಇದಕ್ಕೆ ರೈತ ಸಮುದಾಯ ಕಡಿವಾಣ ಹಾಕಬೇಕು ಅತಿಯಾಗಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ವಿಜೃಂಭಿಸುತ್ತಿದೆ ಇದು ಭೂಮಿಯ ಫಲವತ್ತತೆಯನ್ನು ಹಾಳುಗೆಡುವುತ್ತಿದೆ. ಹೊಳೆ ತೊರೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಾಗುತ್ತಿದೆ. ಈ ಬಗ್ಗೆ ಜಾಗೃತರಾಗುವುದು ಒಳಿತು ಎಂದರು. ಇದೇ ವೇಳೆ ಕಾಯಕ ಜೀವಿ ಕೋಟತಟ್ಟು ಚೆಚ್ಕೆರೆ ಚಂದ್ರಶೇಖರ್ ಗಾಣಿಗ ಇವರನ್ನು ಕೃಷಿ ಪರಿಕರಗಳೊಂದಿಗೆ ಗೌರವಿಸಲಾಯಿತು. ಕಂಬಳದ ಕೋಣಗಳು,ಕೃಷಿ ವಿವಿಧ ಪರಿಕರಗಳ ಪ್ರದರ್ಶನ ಗಮನ ಸೆಳೆಯಿತು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಉಡುಪಿ ಜಿಲ್ಲಾ ಸಂಯೋಜಕ ರವೀಂದ್ರ ಮೊಗವೀರ ವಿಮಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಸಿಇಓ ಶರತ್ ಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ವಾಸು ಪೂಜಾರಿ, ಗ್ರಾಮದ ಹಿರಿಯರಾದ ವೈಕುಂಠ ಹಂದೆ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಕೋಟ ಅಧ್ಯಕ್ಷ ಕೇಶವ ಆಚಾರ್ ಕೋಟ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಶಕೀಲ ಎನ್ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ಪಂಚವರ್ಣದ ಸದಸ್ಯ ಸಂತೋಷ್ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಶಶಿಧರ ತಿಂಗಳಾಯ ವಂದಿಸಿದರು. ಕಾರ್ಯಕ್ರಮವನ್ನು ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!