Sunday, January 19, 2025
Sunday, January 19, 2025

ವಿನೀತ ಸುಜಯೀಂದ್ರ ಹಂದೆಗೆ ಉತ್ತಮ ಶಿಕ್ಷಕ ಪ್ರಶಸ್ತಿ

ವಿನೀತ ಸುಜಯೀಂದ್ರ ಹಂದೆಗೆ ಉತ್ತಮ ಶಿಕ್ಷಕ ಪ್ರಶಸ್ತಿ

Date:

ಕೋಟ, ಅ.19: ಕೋಟದ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ವಿನೀತ ಸುಜಯೀಂದ್ರ ಹಂದೆಯವರು ಅನುದಾನರಹಿತ ಶಾಲೆಗಳಲ್ಲಿನ ಅಧ್ಯಾಪಕರಿಗಾಗಿರುವ ರುಪ್ಸಾ ಸಂಘಟನೆಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿಕ್ಷಕರಾಗಿ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಿದ ವಿನೀತ, ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಬೋಧನೆಯಲ್ಲಿ ವಿಶೇಷ ಅನುಭವವನ್ನು ಹೊಂದಿದ್ದಾರೆ. ಯಕ್ಷಗಾನ, ನಾಟಕ ಮತ್ತು ಭರತನಾಟ್ಯ ಕಲೆಗಳ ಕುರಿತು ವಿಶೇಷ ಆಸಕ್ತಿ ಹೊಂದಿರುವುದರೊಂದಿಗೆ ವಿದ್ಯಾರ್ಥಿಗಳನ್ನು ವಿಜ್ಞಾನ ಮಾದರಿಗಳ ತಯಾರಿಕೆಗೆ ಹಾಗೂ ವಿಜ್ಞಾನ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಲು ವಿಶೇಷ ತರಬೇತಿ ನೀಡಿ ಅವರು ವಿವಿಧ ಹಂತಗಳಲ್ಲಿ ಬಹುಮಾನಿತರಾಗಲು ಕಾರಣರಾಗಿದ್ದು ಇದೇ ತಿಂಗಳ ೨೧ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!