ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ರಾಜ್ಯ ಮತ್ತು ಹೊರ ರಾಜ್ಯದ ಹಿರಿಯ ರಂಗಕರ್ಮಿಗಳಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ವನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ನಾಟಕಗಾರ್ತಿ ಹಾಗೂ ವಿಮರ್ಶಕಿ ಕುಂದಾಪುರದ ಡಾ. ಪಾರ್ವತಿ ಐತಾಳ್, ನಟ ನಿರ್ದೇಶಕ ಮುಂಬೈಯ ಡಾ. ಭರತ್ ಕುಮಾರ್ ಪೊಲಿಪು, ತುಳು ರಂಗಭೂಮಿಯ ಸಂಘಟಕ ಉಡುಪಿಯ ಬಿ. ಪ್ರಭಾಕರ ಭಂಡಾರಿ, ಕನ್ನಡ ರಂಗಭೂಮಿಯ ಸಂಘಟಕ ಮಂಗಳೂರಿನ ಅರೆಹೊಳೆ ಸದಾಶಿವ ರಾವ್, ಹಾವೇರಿಯ ನಟ ಶಂಕರ ಶಿವಪ್ಪ ತುಮ್ಮಣ್ಣನವರ್ ಇವರಿಗೆ ಪ್ರಶಸ್ತಿ ಪತ್ರ, ಬೆಳ್ಳಿ ಪದಕದೊಂದಿಗೆ ಪುರಸ್ಕರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಮಹಾಪ್ರಬಂಧಕ ಇಂದ್ರಾಳಿ ಜಯಕರ ಶೆಟ್ಟಿ, ಮಾಹೆಯ ಡಾ. ಅನ್ನಪೂರ್ಣ, ಕತಾರ್ ತುಳು ಸಂಘಟನೆಯ ಮಾಜಿ ಅಧ್ಯಕ್ಷ ರವಿ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಮುಖ್ಯಸ್ಥ ಹಫೀಜ್ ರೆಹಮಾನ್, ಮಲಬಾರ್ ವಿಶ್ವರಂಗ ಪುರಸ್ಕಾರದ ಸಂಚಾಲಕ ರಾಜೇಶ್ ಭಟ್ ಪಣಿಯಾಡಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಉಪಾಧ್ಯಕ್ಷೆ ಸಂಧ್ಯಾ ಶೆಣೈ ಸ್ವಾಗತಿಸಿ, ಕಸಾಪ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ವಂದಿಸಿದರು.
ನಾಗರಾಜ್ ಹೆಬ್ಬಾರ್, ಪೂರ್ಣಿಮಾ ಜನಾರ್ಧನ್, ಸುಗುಣ ಸುವರ್ಣ, ರಂಜಿನಿ ವಸಂತ್ ಪುರಸ್ಕೃತರನ್ನು ಪರಿಚಯಿಸಿದರು. ಮಹೇಶ್ ಮಲ್ಪೆ ನಿರೂಪಿಸಿದರು.