ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಭಾಗದ ಅಂತಿಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಅಧ್ಯಯನ ಭೇಟಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಮತ್ತಿತರ ಆಧುನಿಕ ತಂತ್ರಜ್ಞಾನಗಳ ಕುರಿತು ಮಾಹಿತಿಯನ್ನು ನೀಡಲಾಯಿತು. ವಿಭಾಗದ ಪ್ರಾಧ್ಯಾಪಕರುಗಳಾದ ವಿಲ್ಮಾ, ಹರೀಶ್ ಕಾಂಚನ್, ಶ್ರೀಕಾಂತ್, ಮೇಘಾ ಮತ್ತು ನಿರ್ಮಲಾ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.
ಅಧ್ಯಯನ ಪ್ರವಾಸ

ಅಧ್ಯಯನ ಪ್ರವಾಸ
Date: