Saturday, January 18, 2025
Saturday, January 18, 2025

ಬಿ.ಇಡಿ ಕೋರ್ಸಿಗೆ ದಾಖಲಾತಿ: ಅರ್ಜಿ ಆಹ್ವಾನ

ಬಿ.ಇಡಿ ಕೋರ್ಸಿಗೆ ದಾಖಲಾತಿ: ಅರ್ಜಿ ಆಹ್ವಾನ

Date:

ಉಡುಪಿ, ಅ.19: ಪ್ರಸಕ್ತ ಸಾಲಿನ ವ್ಯಾಸಾಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ನವೆಂಬರ್ 14 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್ http://www.schooleducation.karnataka.gov.in ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ನೋಡಲ್ ಕೇಂದ್ರದ ವಿವರ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಅರ್ಥೈಸಿಕೊಂಡು ಆನ್‌ಲೈನ್ ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಸೋನಿಕ್ ಟಿ ಮೊ.ನಂ:9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...
error: Content is protected !!