Saturday, January 18, 2025
Saturday, January 18, 2025

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

Date:

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.) ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಸದರಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ತರಬೇತಿ ಕಾರ್ಯಾಗಾರವನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ವತಿಯಿಂದ ನಗರದ ಅಜ್ಜರಕಾಡುವಿನ ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನವೆಂಬರ್ 10, 17 ಮತ್ತು 24 ರಂದು ಮತ್ತು ಡಿಸೆಂಬರ್ 01 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ರ ವರಗೆ ಆಯೋಜಿಸಲಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪತ್ರಿಕೆ 1 ಮತ್ತು ಪತ್ರಿಕೆ 2 (ಎರಡು ಪ್ರತಿಕೆಗಳ) ವಿಷಯಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದು, ಇಚ್ಛೆಯುಳ್ಳ ಅಭ್ಯರ್ಥಿಗಳು ನವೆಂಬರ್ 5 ರ ಒಳಗಾಗಿ ತಮ್ಮ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ ಮತ್ತು ವಿಳಾಸ ಇತ್ಯಾದಿ ವಿವರಗಳನ್ನು ದೂರವಾಣಿ ಸಂಖ್ಯೆ: 0820-2523395 ಅನ್ನು ಸಂಪರ್ಕಿಸಿ ನೀಡುವಂತೆ ಅಥವಾ ಇಮೇಲ್ [email protected] ಮೂಲಕ ಅಥವಾ ಖುದ್ದಾಗಿ ಕಛೇರಿಗೆ ಬಂದು ಸಲ್ಲಿಸಬಹುದಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!