Monday, February 24, 2025
Monday, February 24, 2025

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Date:

ಉಡುಪಿ, ಅ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.

ಉಡುಪಿ ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್, ಕ್ರೀಡಾ ಸಂಚಾಲಕ ರಾಜು ಖಾರ್ವಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದ ಪಥ ಸಂಚಲನದಲ್ಲಿ ಭಾಗವಹಿಸುವ ಉಡುಪಿ, ಬ್ರಹ್ಮಾವರ, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ, ಕಾಪು ಹಾಗೂ ಮಣಿಪಾಲ ತಂಡಗಳಿಗೆ ಪ್ರತ್ಯೇಕ ಬಣ್ಣಗಳ ಜೆರ್ಸಿಯನ್ನು ವಿತರಿಸಲಾಗುತ್ತದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!