Monday, February 24, 2025
Monday, February 24, 2025

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

Date:

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ನಾಗರಾಜ್ ಬಲ್ಲಾಳ್ ಇವರಿಗೆ ಕರ್ನಾಟಕ ರಾಜ್ಯದ ನೋಂದಾಯಿತ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ (ರುಪ್ಸಾ)ದಿಂದ ಕೊಡಮಾಡುವ 2024-25ನೇ ಸಾಲಿನ ಉತ್ತಮ ಆಡಳಿತ ಮಂಡಳಿ ಆಡಳಿತಗಾರ ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇವರು ಪ್ರಶಸ್ತಿ ಪ್ರದಾನ ಮಾಡಿದರು. ನಾಗರಾಜ್ ಬಲ್ಲಾಳ್ ಇವರು ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾಗಿ ಸುಮಾರು ಹತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿ ದೊರೆತಿರುವುದಕ್ಕೆ ಆನಂದತೀರ್ಥ ಶಿಕ್ಷಣ ಸಂಸ್ಥೆಗಳ ಎಲ್ಲಾ ಸದಸ್ಯರು, ಆನಂದತೀರ್ಥ ಪ.ಪೂರ್ವ ಕಾಲೇಜು ಹಾಗೂ ಶ್ರೀ ವಿಶ್ವೇಶತೀರ್ಥ ಮಹಾವಿದ್ಯಾಲಯ ಪದವಿ ಕಾಲೇಜಿನ ಪ್ರಾಂಶುಪಾಲ ವಿಜಯ್ ಪಿ. ರಾವ್, ಆನಂದತೀರ್ಥ ವಿದ್ಯಾಲಯ ಪ್ರಾಂಶುಪಾಲೆ ಡಾ. ಗೀತಾ ಶಶಿಧರ್, ಶಿಕ್ಷಕ ಶಿಕ್ಷಕೇತರ ವೃಂದದವರು, ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!