Monday, February 24, 2025
Monday, February 24, 2025

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Date:

ಕಟಪಾಡಿ, ಅ.24: ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು ಗಣೇಶ ಪ್ರಸಾದ್ ಇವರಿಗೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಇವರು ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶೈಕ್ಷಣಿಕ, ಸಾಮಾಜಿಕ, ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಇವರು, ಯಕ್ಷಗಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಈ ಎಲ್ಲಾ ಸಾಧನೆಯನ್ನು ಗುರುತಿಸಿ, ರಾಜ್ಯಮಟ್ಟದ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಖಾಸಗಿ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸುರೇಶ ಗೊಲ್ಲಾ ತಿಳಿಸಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಆವರಣದ ಪ್ರೋ. ವೆಂಕಟಗಿರಿ ಗೌಡ ಸಬಾಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಣೇಶ ಪ್ರಸಾದ್ ಕೊಡಿಬೆಟ್ಟು ಇವರು ಕೊಡಿಬೆಟ್ಟು ದಿ. ದೇವದಾಸ್ ನಾಯಕ್ ಹಾಗೂ ಡಿ. ಶಾಂತ ನಾಯಕ್ ಇವರ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!