ಉಡುಪಿ, ಅ.25: ರಾಜ್ಯ ಸರ್ಕಾರದ ಆದೇಶದಂತೆ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ಚಮಚಗಳು, ಕ್ಲಿಂಗ್ ಫಿಲ್ಮ್ಸ್ ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು, ಥರ್ಮೋಕೋಲ್ ಹಾಗೂ ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ನಿಂದ ತಯಾರಾದಂತಹ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ನಿಷೇಧಿಸಲಾಗಿದ್ದು, ಯಾವುದೇ ವ್ಯಕ್ತಿ, ಅಂಗಡಿ ಮಾಲೀಕರು, ಮಾರಾಟಗಾರರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿಗಳು ಮತ್ತು ಮಾರಾಟಗಾರರರು ಇವುಗಳ ಬಳಕೆಯನ್ನು ಮಾಡುವಂತಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ 25,000 ರೂ. ಗಳ ವರೆಗೆ ದಂಡ ವಿಧಿಸುವುದರೊಂದಿಗೆ ಪರಿಸರ ಸಂರಕ್ಷಣೆ ಕಾಯಿದೆ 1986 ರ ಸೆಕ್ಷನ್ 19 ರ ಅನ್ವಯ ಕಾನೂನು ಕ್ರಮ ತೆಗೆದುಕೊಂಡು ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಈ ಉದ್ದೇಶವನ್ನು ಮನಗೊಂಡು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ
ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ
Date: