Sunday, January 12, 2025
Sunday, January 12, 2025

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

Date:

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವ ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ಪೂರ್ಣಪ್ರಜ್ಞ ಕಾಲೇಜಿನ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಎಸ್.ಸಿ.ಸಿ ಅರ್ಮಿ, ಎನ್.ಸಿ.ಸಿ ನೇವಿ, ರೇಂಜರ್ಸ್ ರೋಡ್, ರೋರ‍್ಸ್, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ಘಟಕ, ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್‌ನ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರಾಮು ಎಲ್ ವಹಿಸಿದ್ದರು. ಕುಂದಾಪುರ ರೆಡ್‌ಕ್ರಾಸ್ ಘಟಕದ ಸಭಾಪತಿ ಜಯಕರ ಶೆಟ್ಟಿ ರಕ್ತದಾನದ ಮಹತ್ವವನ್ನು ವಿವರಿಸಿದರು. ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್, ಯುವ ರೆಡ್‌ಕ್ರಾಸ್ ಸಂಯೋಜಕಿ ಅನುಷಾ ಕೆ., ಕಾಲೇಜಿನ ಉಪನ್ಯಾಸಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಮ ಕೆ. ಸ್ವಾಗತಿಸಿ, ವಿದ್ಯಾರ್ಥಿನಿ ರತ್ನಶ್ರೀ ನಿರೂಪಿಸಿ, ಕ್ಷಮಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉದ್ಯಾವರ: ಜಾನುವಾರು ಜಾಗೃತಿ ಶಿಬಿರ

ಉದ್ಯಾವರ, ಜ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಪಶುಪಾಲನಾ ಮತ್ತು ಪಶುವೈದ್ಯಕೀಯ...

ಉಡುಪಿಯಲ್ಲಿ ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ಉಡುಪಿ, ಜ.11: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ...

ರೈಲು ನಿಲ್ದಾಣದ ಸೀಲಿಂಗ್ ಸ್ಲ್ಯಾಬ್ ಕುಸಿತ: ಹಲವರಿಗೆ ಗಾಯ

ಕಾನ್ಪುರ, ಜ.11: ನಿರ್ಮಾಣ ಹಂತದ ಕಟ್ಟಡದ ಸೀಲಿಂಗ್ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದ...

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

ಕೋಟ, ಜ.11: ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಛೇರಿಗೆ ನಬಾರ್ಡ್...
error: Content is protected !!