ಉಡುಪಿ, ಅ.27: ಭಾರತೀಯ ಜೇಸಿಐನ ವಲಯ ೧೫ರ ಪ್ರತಿಷ್ಠಿತ ಬೆಳ್ಮಣ್ಣು ಜೇಸಿಐನ ೪೪ನೇ ವರ್ಷದ ಜೇಸಿ ಸಪ್ತಾಹ ‘ಅಮೃತೋತ್ಸವ’ ಸಮಾರಂಭದಲ್ಲಿ ಬೆಳ್ಮಣ್ಣು ಜೇಸಿಐನ ಘಟಕಾಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕಳೆದ 25 ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯ, ಕೃಷಿ, ಸ್ವಚ್ಛತೆ ಮುಂತಾದ ಹಲವಾರು ಕ್ಷೇತ್ರದಲ್ಲಿ ನಿರಂತರ ಕಾರ್ಯಕ್ರಮಗಳ ಮೂಲಕ ಜನಪಯೋಗಿ ಕಾರ್ಯಕ್ರಮ ನಡೆಸುತ್ತ ಬರುತ್ತಿರುವ ಸಂಸ್ಥೆಯ ಸಾಧನೆಯನ್ನು ಪರಿಗಣಿಸಿ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಸ್ಥೆಗೆ ಪ್ರತಿಷ್ಠಿತ ‘ಸಮಾಜ ಸೇವಾ ಸಂಘ ರತ್ನ ಪ್ರಶಸ್ತಿ’ ಸಂಸ್ಥೆಯ ಪರವಾಗಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರನ್ನು ಗೌರವಿಸಿದರು. ಸಮಾರಂಭದಲ್ಲಿ ಜೇಸಿಐ ವಲಯಾಧ್ಯಕ್ಷರಾದ ಗಿರೀಶ್ ಎಸ್.ಪಿ., ಭಾರತೀಯ ಜೇಸಿಐನ ಫೌಂಡೇಶನ್ ನಿರ್ದೇಶಕರಾದ ಆಲನ್ ರೋಹನ್ ವಾಜ್, ಜೇಸಿಐ ವಲಯ 15ರ ಪೂರ್ವ ವಲಯಾಧ್ಯಕ್ಷರಾದ ಹರಿಶ್ಚಂದ್ರ ಅಮೀನ್, ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ಕೆ. ಸತ್ಯಶಂಕರ್ ಶೆಟ್ಟಿ, ಉದ್ಯಮಿ ಅರುಣ್ ಕುಮಾರ್ ನಿಟ್ಟೆ, ಉಡುಪಿ
ಜಿಲ್ಲಾ ಭಾರತೀಯ ದಂತ ವೈದ್ಯಕೀಯ ಸಂಘದ ಅಧ್ಯಕ್ಷರಾದ ಜಗದೀಶ್ ಜೋಗಿ, ಜೇಸಿಐ ವಲಯ ಆಡಳಿತ ಮಂಡಳಿಯ ನಿರ್ದೇಶಕರಾದ ಅಭಿಲಾಷ್, ಬೆಳ್ಮಣ್ಣು ಜೇಸಿಐನ ಪೂರ್ವಾಧ್ಯಕ್ಷರಾದ ಅನಿಲ್ ಕುಮಾರ್ ಮೊದಲಾದವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬೆಳ್ಮಣ್ಣು ಜೇಸಿಐ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಪೂರ್ವಾಧ್ಯಕ್ಷರಾದ ವೀಣೇಶ್ ಅಮೀನ್, ನಿಕಟಪೂರ್ವಾಧ್ಯಕ್ಷರಾದ ಸತೀಶ್ ಪೂಜಾರಿ, ಕಾರ್ಯದರ್ಶಿ ಸೌಜನ್ಯ ಕೋಟ್ಯಾನ್, ಮಹಿಳಾ ಸಂಯೋಜಕಿ ಶ್ವೇತಾ ಆಚಾರ್ಯ, ಯುವ ಜೇಸಿ ಅಧ್ಯಕ್ಷರಾದ ಪೂರ್ವಿ ರಾವ್ ಮೊದಲಾದವರಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರುಗಳಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಪ್ರಶಾಂತ್ ಪೂಜಾರಿ, ಸತೀಶ್ ಅಬ್ಬನಡ್ಕ, ಸದಸ್ಯರಾದ ಸಂಧ್ಯಾ ಶೆಟ್ಟಿ, ಅಶ್ವಿನಿ ಪ್ರಭಾಕರ್, ಪದ್ಮಶ್ರೀ ಪೂಜಾರಿ, ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಕೀರ್ತನ್ ಪೂಜಾರಿ, ಪ್ರದೀಪ್ ಸುವರ್ಣ, ಪುಷ್ಪ ಕುಲಾಲ್, ಹರಿಣಿ ಪೂಜಾರಿ, ಯೋಗೀಶ್ ಆಚಾರ್ಯ, ಮಂಜುನಾಥ ಆಚಾರ್ಯ, ಶಾಂತರಾಮ್ ಕುಲಾಲ್, ಹರೀಶ್ ಪೂಜಾರಿ, ಕಿರಣ್ ಶೆಟ್ಟಿ, ವೀಣಾ ಪೂಜಾರಿ, ಸುಲೋಚನಾ ಕೋಟ್ಯಾನ್, ಲೀಲಾ ಪೂಜಾರಿ, ಲಲಿತಾ ಆಚಾರ್ಯ ಮೊದಲಾದವರಿದ್ದರು.