Tuesday, February 25, 2025
Tuesday, February 25, 2025

ಚಕ್ರತೀರ್ಥ ಸೇತುವೆ ಉದ್ಘಾಟನೆ

ಚಕ್ರತೀರ್ಥ ಸೇತುವೆ ಉದ್ಘಾಟನೆ

Date:

ಉಡುಪಿ, ಅ.27: ಉಡುಪಿ ನಗರಸಭೆಯ ಮೂಡುಸಗ್ರಿ ವಾರ್ಡಿನ ಚಕ್ರತೀರ್ಥ ಬಳಿ ಸುಮಾರು 13.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸೇತುವೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮಳೆಗಾಲದ ಅವಧಿಯಲ್ಲಿ ಹಳೆ ಸೇತುವೆ ಕುಸಿತಗೊಂಡ ಹಿನ್ನಲೆಯಲ್ಲಿ ನಗರಸಭೆಯ ಅನುದಾನದ ಮೂಲಕ ಅನುದಾನ ಮಂಜೂರು ಮಾಡಿ ನೂತನ ಸೇತುವೆ ಇಂದು ಲೋಕಾರ್ಪಣೆಯಾಗಿದ್ದು, ಸಗ್ರಿ ವಾರ್ಡಿನ ಇನ್ನೊಂದು ಸೇತುವೆಯ ಕಾಮಗಾರಿಯು ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದೆ ಎಂದರು.

ಈಗಾಗಲೇ ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳು, ಚರಂಡಿ ಸಹಿತ ಮೂಲ ಸೌಕರ್ಯ ಅಭಿವೃದ್ಧಿಗೆ ಸುಮಾರು 5 ಕೋಟಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಈಗಾಗಲೇ ಲೋಕೋಪಯೋಗಿ ಇಲಾಖೆಯ ರಸ್ತೆಗಳ ತುರ್ತು ನಿರ್ವಹಣೆ ತುರ್ತಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ವೇದವ್ಯಾಸ ಐತಾಳ್, ರವಿ ಐತಾಳ್, ಸ್ಥಳೀಯ ಮುಖಂಡರಾದ ಸಂತೋಷ್ ಆಚಾರ್ಯ, ಪ್ರಶಾಂತ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!