Tuesday, January 7, 2025
Tuesday, January 7, 2025

ತಾಯಿಯ ಹೆಸರಲ್ಲಿ ಒಂದು ಗಿಡ ನೆಡುವ ಅಭಿಯಾನ

ತಾಯಿಯ ಹೆಸರಲ್ಲಿ ಒಂದು ಗಿಡ ನೆಡುವ ಅಭಿಯಾನ

Date:

ಕಾರ್ಕಳ, ಅ.28: ಭಾರತ ಸರಕಾರ ಯುವಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾಡಳಿತ ಉಡುಪಿ, ಕುಂದಾಪುರ ಅರಣ್ಯ ವಿಭಾಗ ಕಾರ್ಕಳ ವಲಯ, ಸ್ವಚ್ಛ ಕಾರ್ಕಳ ಬ್ರಿಗೇಡ್, ರಾಜೇಶ್ವರಿ ಎಜುಕೇಶನ್ ಫೌಂಡೇಶನ್ (ರಿ.) ಸಾಣೂರು, ಇವರ ಸಹಯೋಗದಲ್ಲಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ನೇತೃತ್ವದಲ್ಲಿ “ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ” (ತಾಯಿಯ ಹೆಸರಲ್ಲಿ ಒಂದು ಗಿಡ ನೆಡುವ ಅಭಿಯಾನ) ನಡೆಯಿತು. ಸುಮಾರು 500 ಗಿಡಗಳನ್ನು ನೆಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, 283 ಗಿಡಗಳನ್ನು ನೆಡಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಇವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೇಂದ್ರ ಸರಕಾರದ ಹಲವಾರು ಕಾರ್ಯಕ್ರಮಗಳನ್ನು ಸಂಘ ಸಂಸ್ಥೆಗಳು ಯಶಸ್ವಿಯಾಗಿ ಅನುಷ್ಠಾನಗೊಳಿಸಿದರೆ, ಅಭಿವೃದ್ಧಿಗೆ ಸಹಕಾರಿಯಾಗಲಿದೆ ಮರಗಳನ್ನು ಪೋಷಿಸಿದರೆ ನಮಗೆ ಒಳ್ಳೆಯ ಗಾಳಿ, ನೀರಿಗೆ ತೊಂದರೆಯಾಗುದಿಲ್ಲ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವರಾಜ್ ಜೈನ್ ಅಧ್ಯಕ್ಷರು ಗ್ರಾಮ ಪಂಚಾಯತ್ ಸಾಣೂರು ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಂಜುನಾಥ್ ಗಾಣಿಗ ವಲಯ ಅರಣ್ಯಧಿಕಾರಿ ಕಾರ್ಕಳ -ಮೂಡಬಿದ್ರೆ ತಾಯಿಯ ಹೆಸರಲ್ಲಿ ನೆಡುವ ಒಂದು ಗಿಡವು ನಾವು ಪ್ರಕೃತಿ ಎಂಬ ತಾಯಿಗೆ ನೀಡುವ ಗೌರವ, ಎಂದು ಹೇಳುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜೇಶ್ವರಿ ಎಜುಕೇಶನ್ ಫೌಂಡೇಶನ್ ಸಂಸ್ಥಾಪಕರಾದ ದೇವಿಪ್ರಸಾದ್ ಶೆಟ್ಟಿ, ಮಾತನಾಡಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸಿದ ಯುವಕ ಮಂಡಲ ಸಾಣೂರು ಮತ್ತು ಸ್ವಚ್ಛ ಬ್ರಿಗೇಡ್ ಕಾರ್ಕಳ ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರಿಗೆ ಕೃತಜ್ಞತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್ ಇದರ 22 ಮಂದಿ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ಸಾಣೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರುಗಳಾದ ಕರುಣಾಕರ್ ಕೋಟ್ಯಾನ್, ಸುಜಾತಾ ಶೆಟ್ಟಿ ಸದಸ್ಯರಾದ ರಮೇಶ್ ಪಾಲ್ಗೊಂಡಿದ್ದರು. ರಾಜೇಶ್ವರಿ ಎಜುಕೇಶನ್ ಫೌಂಡೇಶನ್ ಇದರ ಕಾರ್ಯದರ್ಶಿ ಶ್ವೇತಾ ದೇವಿಪ್ರಸಾದ್ ಶೆಟ್ಟಿ, ಯುವಕ ಮಂಡಲ ಸಾಣೂರು ಇದರ ಮಾಜಿ ಅಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ, ಶಂಕರ್ ಶೆಟ್ಟಿ, ಜಗದೀಶ್ ಕುಮಾರ್, ಮಹೇಶ್ ಕುಮಾರ್, ಪ್ರಸಾದ್ ಪೂಜಾರಿ, ಉಪಾಧ್ಯಕ್ಷರಾದ ಹರೀಶ್ ರಾವ್, ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ, ಪ್ರಶಾಂತ್ ಆಚಾರ್ಯ, ಪದಾಧಿಕಾರಿಗಳಾದ ರಾಜೇಶ್ ಪೂಜಾರಿ, ವಿಘ್ನೇಶ್ ರಾವ್, ರಮೇಶ್ ಪೂಜಾರಿ, ಪ್ರಭಾಕರ್ ಶೆಟ್ಟಿ, ಮುರಳೀಧರ ಸುವರ್ಣ, ವಿದ್ಯಾನಂದ, ಪ್ರಶಾಂತ್ ಶೆಟ್ಟಿ, ಜಯನ್ ಶೆಟ್ಟಿ, ಸುದರ್ಶನ್ ನಾಯ್ಕ್, ಪ್ರಸನ್ನ ಆಚಾರ್ಯ, ಪ್ರವೀಣ್ ಶೆಟ್ಟಿ, ಸುವಿತ್, ಜಯ ಶೆಟ್ಟಿಗಾರ್, ಶ್ರೀನಿವಾಸ್ ಆಚಾರ್ಯ, ವಿಕಾಸ್, ಧನ್ಯಶ್ರೀ, ಅಲೋಪ್, ಆರ್ಯನ್, ರಚಿತ್ ಅಭಿಯಾನದಲ್ಲಿ ಭಾಗವಹಿಸಿದರು. ಮಂಡಲದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಪ್ರಕಾಶ್ ರಾವ್ ವಂದಿಸಿದರು. ಮೋಹನ್ ಶೆಟ್ಟಿ ಸಾಣೂರು ಕಾರ್ಯಕ್ರಮ ನಿರೂಪಿಸಿದರು‌.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಉಡುಪಿ ಬುಲೆಟಿನ್’ ಇಮ್ಪ್ಯಾಕ್ಟ್; ಹೆದ್ದಾರಿಯ ಮೇಲೆ ಬಿದ್ದಿದ್ದ ಮಣ್ಣಿನ ರಾಶಿ ತೆರವು

ಉಡುಪಿ ಬುಲೆಟಿನ್, ಜ.6: ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯ ಆಶೀರ್ವಾದ...

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ, ಜ.6: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ...

ಬಾರಕೂರು: ಅಂತರ ಕಾಲೇಜು ಬೆಸ್ಟ್ ಟ್ಯಾಲೆಂಟ್ ಅವಾರ್ಡ್, ವಿಡಿಯೋ ಮೇಕಿಂಗ್ ಸ್ಪರ್ಧೆ

ಬಾರಕೂರು, ಜ.6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರ...

ಮಣಿಪಾಲ ಕೆ.ಎಂ.ಸಿ: ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, ಜ.6: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಭಾರತ ಸರ್ಕಾರದ ಅನುದಾನಿತ...
error: Content is protected !!